April 20, 2024

Bhavana Tv

Its Your Channel

ಜಿಲ್ಲೆಯಲ್ಲಿ ವಿಶ್ವವಿದ್ಯಾಲಯ ಸ್ಥಾಪನೆಗೆ ಪ್ರಯತ್ನ ನಡೆಸಲು ನಿರ್ಣಯ

ಹೊನ್ನಾವರ:’ಶೈಕ್ಷಣಿಕ ಹಿತದೃಷ್ಟಿಯಿಂದ ಹಾಗೂ ಆಡಳಿತಾತ್ಮಕ ಅನುಕೂಲಕ್ಕಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ವಿಶ್ವವಿದ್ಯಾಲಯ ಸ್ಥಾಪನೆಯಾಗುವ ಅಗತ್ಯವಿದ್ದು ಈ ಕುರಿತಂತೆ ಜಿಲ್ಲೆಯ ಎಲ್ಲ ಕಾಲೇಜುಗಳ ಶಿಕ್ಷಕರ ಸಂಘ ಹಾಗೂ ಆಡಳಿತ ಮಂಡಳಿಗಳ ಜೊತೆಗೆ ಅಗತ್ಯ ಸಂವಹನ ನಡೆಸಬೇಕು’ ಎಂದು ಎಸ್.ಡಿ.ಎಂ. ಕಾಲೇಜಿನ ಶಿಕ್ಷಕರ ಸಂಘದ ಆಶ್ರಯದಲ್ಲಿ ಶುಕ್ರವಾರ ಕಾಲೇಜಿನಲ್ಲಿ ನಡೆದ ‘ಉತ್ತರ ಕನ್ನಡ ಜಿಲ್ಲೆಯಲ್ಲಿ ವಿಶ್ವವಿದ್ಯಾಲಯ ಸ್ಥಾಪನೆ ಅಗತ್ಯ’ ಎನ್ನುವ ವಿಷಯದ ಕುರಿತ ವಿಚಾರಗೋಷ್ಠಿಯಲ್ಲಿ ನಿರ್ಣಯ ಅಂಗೀಕರಿಸಲಾಯಿತು.
‘ವಿವಿ ಸ್ಥಾಪನೆಯ ಕುರಿತಂತೆ ವಿಸ್ತçತ ಚರ್ಚೆ ನಡೆಸಲು ಸಮಾವೇಶವೊಂದನ್ನು ಏರ್ಪಡಿಸಬೇಕು.ಉತ್ತರ ಕನ್ನಡ ಜಿಲ್ಲಾ ಆಡಳಿತ ಮಂಡಳಿ ಮತ್ತು ಪ್ರಾಚಾರ್ಯರ ಒಕ್ಕೂಟ,ವಿದ್ಯಾರ್ಥಿ ಹಾಗೂ ಇತರ ಸಂಘಟನೆಗಳ ಸಹಕಾರದೊಂದಿಗೆ ಈ ಸಮಾವೇಶ ನಡೆಸಬೇಕು’ ಎಂದೂ ನಿರ್ಣಯಿಸಲಾಯಿತು.
ಹಿರಿಯ ಉಪನ್ಯಾಸಕರಾದ ಡಾ.ವಿ.ಎಂ.ಭoಡಾರಿ, ಪ್ರೊ.ಸಂಜೀವ ನಾಯ್ಕ, ಡಾ.ಸುರೇಶ ಎಸ್. ಹಾಗೂ ಪ್ರೊ.ನಾಗರಾಜ ಹೆಗಡೆ ಅಪಗಾಲ ವಿಷಯ ಮಂಡಿಸಿದರು.
‘ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಪ್ರತ್ಯೇಕ ವಿವಿ ಸ್ಥಾಪನೆಯಾಗಿದೆ.ಭೌಗೋಲಿಕವಾಗಿ ವಿಸ್ತೀರ್ಣವಾಗಿರುವ ಹಾಗೂ ಸಾಕಷ್ಟು ಪ್ರತಿಭಾನ್ವಿತರನ್ನು ಹೊಂದಿರುವ ಉತ್ತರ ಕನ್ನಡ ಜಿಲ್ಲೆ ವಿವಿ ಸೌಲಭ್ಯದಿಂದ ವಂಚಿತವಾಗಿದೆ.ಜಿಲ್ಲೆಯಲ್ಲಿ ವಿವಿ ಸ್ಥಾಪನೆಯಾದರೆ ವಿದ್ಯಾರ್ಥಿನಿಯರಿಗೆ ಹೆಚ್ಚಿನ ಅನುಕೂಲವಾಗಲಿದ್ದು ಉನ್ನತ ವ್ಯಾಸಂಗ ಕೈಗೊಳ್ಳುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತದೆ.ಸಂಶೋಧನೆಗಳಿಗೆ ಹೆಚ್ಚಿನ ಅವಕಾಶ ಸಿಗಲಿದ್ದು ಉದ್ಯೋಗಾವಕಾಶಗಳು ಹೆಚ್ಚುತ್ತವೆ. ವಿವಿ ಸ್ಥಾಪನೆಯ ವಿಚಾರದಲ್ಲಿ ಗಂಭೀರ ಪ್ರಯತ್ನಗಳು ಇದುವರೆಗೆ ನಡೆದಿಲ್ಲ’ ಎಂದು ಗೋಷ್ಠಿಯಲ್ಲಿ ಅಭಿಪ್ರಾಯಗಳು ವ್ಯಕ್ತವಾದವು.
ಪ್ರಾಚಾರ್ಯರಾದ ಡಾ.ವಿಜಯಲಕ್ಷಿö್ಮ ಎಂ.ನಾಯ್ಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಕಾಲೇಜಿನಿಂದ ನಿರ್ಗಮಿಸಿರುವ ರಕ್ಷಾ ನಾಯ್ಕ ಹಾಗೂ ದಿವ್ಯಾ ನಾಯ್ಕ ಅವರನ್ನು ಸಂಘದ ಪರವಾಗಿ ಸನ್ಮಾನಿಸಿದರು.
ಶಿಕ್ಷಕರ ಸಂಘದ ಅಧ್ಯಕ್ಷ ಪ್ರೊ.ಎಂ.ಜಿ.ಹೆಗಡೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಉಪಾಧ್ಯಕ್ಷೆ ಪ್ರೊ.ಕಾವೇರಿ ಮೇಸ್ತ,ಪ್ರೊ.ಪ್ರಶಾಂತ ಹೆಗಡೆ ಮೂಡಲಮನೆ ನಿರೂಪಿಸಿದರು.ಖಜಾಂಚಿ ಡಾ.ಮಂಜುನಾಥ ಹೆಗಡೆ ವಂದಿಸಿದರು.

error: