October 20, 2021

Bhavana Tv

Its Your Channel

ಅಕ್ಟೋಬರ್ ೧೬ ರಂದು ಕರ್ಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶ್ರೀಕುಮಾರ ಪ್ಯೂಯಲ್ಸ್ ಶುಭಾರಂಭ

ವರದಿ: ವೆಂಕಟೇಶ ಮೇಸ್ತ ಹೊನ್ನಾವರ

ಹೊನ್ನಾವರ; ರಾಷ್ಟ್ರೀಯ ಹೆದ್ದಾರಿ ಕರ್ಕಿ ಬಳಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ಕುಮಾರ್ ಪೂಯಲ್ಸ್ ಶನಿವಾರ ಅಕ್ಟೋಬರ್ ೧೬ರಂದು ಸಂಜೆ ೪-೦೦ ಗಂಟೆಗೆ ಶುಭಾರಂಭಗೊಳ್ಳಲಿದೆ ಎಂದು
ಶ್ರೀ ಕುಮಾರ್ ರೋಡಲೈನ್ಸ ಮಾಲೀಕ ವೆಂಕಟರಮಣ ಹೆಗಡೆ ತಿಳಿಸಿದ್ದಾರೆ.
ಅವರು ಗುರುವಾದ ಶ್ರೀ ಕುಮಾರ್ ಕಚೇರಿಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿ ಉ.ಕ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಉದ್ಘಾಟನೆ ಮಾಡಲಿದ್ದು ,ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಲಿದ್ದಾರೆ.
ಕುಮಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ, ನಿಕಟಪೂರ್ವ ಜಿಲ್ಲಾ ಪಂಚಾಯತ ಸದಸ್ಯ ಶಿವಾನಂದ ಹೆಗಡೆ ಹಾಗೂ ಇತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ವಿವರ ನೀಡಿದರು.

error: