May 2, 2024

Bhavana Tv

Its Your Channel

ಮೇಕೆದಾಟು ಪಾದಯಾತ್ರೆಗೆ ಪಾಲ್ಗೊಂಡ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸದಸ್ಯರು

ಹೊನ್ನಾವರ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಳೆದ ಐದು ದಿನಗಳಿಂದ ನಡೆಯುತ್ತಿರುವ ಮೇಕೆದಾಟು ಕುಡಿಯುವ ನೀರಿನ ಯೋಜನೆಯ ತ್ವರಿತ ಅನುಷ್ಠಾನಕ್ಕಾಗಿ ಆಗ್ರಹಿಸಿ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಪಕ್ಷದ ಮುಖಂಡರೊಂದಿಗೆ ಗುರುವಾರ ರಾಮನಗರಕ್ಕೆ ಆಗಮಿಸಿ ರಾಮನಗರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದ ಎದುರು ಸಮಾವೇಶಗೊಂಡ ಪ್ರತಿಭಟನೆಯಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಲಂಭೋಧರ ನಾಯ್ಕ, ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಕೆ.ಎಚ್. ಗೌಡ ಪದಾಧಿಕಾರಿಗಳಾದ ಮಹೇಶ ನಾಯ್ಕ, ಹಳದೀಪುರ, ಮಾದೇವ ನಾಯ್ಕ, ಕರ್ಕಿ, ಇನ್ನೂ ಹಲವು ಮುಖಂಡರು ತೆಂಗೇರಿಯವರೊಂದಿಗೆ ಪಾಲ್ಗೊಂಡರು.

error: