May 6, 2024

Bhavana Tv

Its Your Channel

ಕಡ್ಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಮಾನ್ಯ ಸೇವಾ ಕೇಂದ್ರದ ಉದ್ಘಾಟನೆ

ಹೊನ್ನಾವರ ತಾಲೂಕಿನ ಕಡ್ಲೆ ಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಮಾನ್ಯ ಸೇವಾ ಕೇಂದ್ರದ ಉದ್ಘಾಟನೆ ಕಾರ್ಯಕ್ರಮವು ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸೌಲಭ್ಯಗಳನ್ನು ಗ್ರಾಮದ ಜನರಿಗೆ ಒಂದೇ ಸೂರಿನಡಿಯಲ್ಲಿ ಒದಗಿಸುವ ಬಹು ನಿರೀಕ್ಷಿತ ಕಾರ್ಯಕ್ರಮವಿದು.ಕಡ್ಲೆ ಗ್ರಾಮ ಪಂಚಾಯತ್ ಅಧ್ಯಕ್ಷ ಗೋವಿಂದ ಗೌಡ ರಿಬ್ಬನ್ ಕತ್ತರಿಸಿ, ಜ್ಯೋತಿ ಬೆಳಗುವ ಮೂಲಕ ಭಕ್ತಿ ಪೂರ್ವಕವಾಗಿ ಕಾರ್ಯಕ್ರಮ ಉದ್ಘಾಟಿಸಿದರು.
ಯೋಜನಾಧಿಕಾರಿ ವಾಸಂತಿ ಅಮೀನ್ ಮಾತನಾಡಿ ನಮ್ಮ ಸೇವಾಪ್ರತಿನಿಧಿ, ಮೇಲ್ವಿಚಾರಕರೆಲ್ಲ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಕೇಂದ್ರ ಸರಕಾರದ ಈ ಯೋಜನೆಯ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದರು.

ಸಿಎಸ್‌ಸಿ ಕೇಂದ್ರಕ್ಕೆ ಸ್ಥಳವಕಾಶ ನೀಡಿದ ಮಹನೀಯರು ಹಾಗೂ ಉಪ್ಲೆ ಶ್ರೀ ಮಹಾಲಿಂಗೇಶ್ವರ ದೇವಾಲಯದ ಕಾರ್ಯದರ್ಶಿಗಳೂ ಆದ ಸುಬ್ರಹ್ಮಣ್ಯ ಭಟ್ ಮಾತನಾಡಿ ಬಾಡಿಗೆ ಮಹತ್ವದಲ್ಲ. ಶ್ರೀ ಮಂಜುನಾಥ ಸ್ವಾಮಿಯ ಫೋಟೋ ನನ್ನ ಕಟ್ಟಡದೊಳಗೆ ಬರುತ್ತಿರುವುದು ನನ್ನ ಭಾಗ್ಯ ಎಂದರು.
ಕಡ್ಲೆ ಗ್ರಾಮ ಪಂಚಾಯತ್ ಅಧ್ಯಕ್ಷ ಗೋವಿಂದ ಗೌಡ ಮಾತನಾಡಿ ಪ್ರಗತಿ ಬಂಧು ಸಂಘಗಳ ಕೆಲಸದಿಂದ ಕೃಷಿಕರ, ಹಳ್ಳಿಯ ಅಭಿವೃದ್ಧಿ ಆಗುತ್ತಿದೆ ಎಂದರು.
ಸೇವಾಪ್ರತಿನಿಧಿ ಮಹಾಲಕ್ಷ್ಮೀ ನಾಯ್ಕ್ ಉತ್ತಮ ಕ್ರಿಯಾಶೀಲರಾಗಿ ಯೋಜನೆಯೊಂದಿಗೆ ಹಾಗೂ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಸದಸ್ಯರ ಜೊತೆಗೆ ಉತ್ತಮ ಬಾಂಧವ್ಯ ಹೊಂದಿದ್ದು, ಒಕ್ಕೂಟ ವನ್ನು ‘ಎ’ ಶ್ರೇಣಿಯಲ್ಲಿ ಮುನ್ನಡೆಸಿಕೊಂಡು ಜನಾನುರಾಗಿಯಾಗಿದ್ದಾರೆ ಎಂದು ಎಲ್ಲರಿಗೂ ಸ್ವಾಗತವನ್ನು ಕೋರಿದರು. ವಲಯ ಮೇಲ್ವಿಚಾರಕ ಅಶೋಕ್ ನಾಯ್ಕ್ ಕಾರ್ಯಕ್ರಮ ನಿರೂಪಣೆ ಮಾಡಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷೆ ಜ್ಯೋತಿ ಶೆಟ್ಟಿ, ಪದಾಧಿಕಾರಿಗಳು ಹಾಗೂ ಸದಸ್ಯರು, ಸಿಎಸ್‌ಸಿ ಸಿಬ್ಬಂದಿ ಉಮೇಶ್ ಗೌಡ, ಪ್ರತಿಭಾ ಮತ್ತಿತರರು ಉಪಸ್ಥಿತರಿದ್ದರು.

error: