May 16, 2024

Bhavana Tv

Its Your Channel

ಹಳದೀಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಹೊನ್ನಾವರ: `ಮಹಿಳೆಯರು ಒಂದೇ ಕ್ಷೇತ್ರಕ್ಕೆ ಮೀಸಲಿರದೇ ಇಂದು ಆರ್ಥಿಕ, ರಾಜಕೀಯ, ರಕ್ಷಣೆ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ತಮ್ಮದೇ ಆದ ಛಾಪು ಮೂಡಿಸುತ್ತಿದ್ದಾರೆ’ ಎಂದು ಹಳದೀಪುರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವೈಶಾಲಿ ಪ್ರಕಾಶ ನಾಯ್ಕ ಹೇಳಿದರು.

ಹೊನ್ನಾವರ ತಾಲೂಕಿನ ಹಳದೀಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬಡ, ದುರ್ಬಲ ಹೆಣ್ಣು ಮಕ್ಕಳನ್ನು ಪ್ರೋತ್ಸಾಹಿಸಿ, ಸುಂದರ ಬದುಕು ರೂಪಿಸುವ ಕಾರ್ಯಕ್ರಮ, ಯೋಜನೆಗಳ ಮೂಲಕ ಪ್ರತೀ ವರ್ಷ ಮಹಿಳಾ ದಿನಾಚರಣೆ ಆಚರಿಸಲಾಗುತ್ತಿದೆ. ಪ್ರತಿಯೊಬ್ಬರೂ ಮಹಿಳೆಯರನ್ನು ಪೂಜ್ಯ ಭಾವನೆಯಿಂದ ಗೌರವಿಸಬೇಕು ಎಂದು ಕರೆ ನೀಡಿದರು.

ಕೇಂದ್ರ ಶಾಲಾ ಶಿಕ್ಷಕಿ ಸುರೇಖಾ ನಾಯ್ಕ, ನವೀಲಗೋಣ ಗ್ರಾಪಂ ಸದಸ್ಯೆ ಗೀತಾ ಹೆಗಡೆ, ಗ್ರಾಮ ಲೆಕ್ಕಾಧಿಕಾರಿ ವೈಭವಿ ಭಂಡಾರಿ ಉಪಸ್ಥಿತರಿದ್ದರು.
ವಿವಿಧ ಸ್ಪರ್ಧೆ: ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಿಗಾಗಿ ಸಂಗೀತ ಖುರ್ಚಿ, ಕಣ್ಣಿಗೆ ಪಟ್ಟಿ ಕಟ್ಟಿ ಹಣೆಗೆ ಬಿಂದಿ ಇಡುವುದು, ಹಣೆ ಮೇಲೆ ಬಿಸ್ಕತ್ ಇಟ್ಟು ತಿನ್ನುವುದು, ತ್ರೋ ಬಾಲ್ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಪರಿಶ್ರಮ ಸಂಜೀವಿನಿ ಒಕ್ಕೂಟದ ಸದಸ್ಯರು, ಹಾಲು ಒಕ್ಕೂಟದ ಸದಸ್ಯರು ಸೇರಿದಂತೆ ವಿವಿಧ ಸಂಘ-ಸAಸ್ಥೆಯ ಮಹಿಳೆಯರು ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಬುದ್ಧಿಶಕ್ತಿ ಪ್ರದರ್ಶಿಸಿದರು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಆಕರ್ಷಕ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಹಳದೀಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಹಾಗೂ ಹಳದೀಪುರ ಭಾಗದ ನೂರಾರು ಸಾರ್ವಜನಿಕರು ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

error: