May 19, 2024

Bhavana Tv

Its Your Channel

ಗ್ರಾಮೀಣ ಪ್ರದೇಶಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹ

ಹೊನ್ನಾವರದ ಗ್ರಾಮೀಣ ಪ್ರದೇಶಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಲು ಮನವಿ, ಉಲ್ಲದಿದ್ದರೆ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಕರವೇ ತಾಲೂಕು ಅಧ್ಯಕ್ಷ ಮಂಜುನಾಥ ಗೌಡ ಎಚ್ಚರಿಸಿದರು

ಹೊನ್ನಾವರ; ತಾಲೂಕಿನ ಗ್ರಾಮೀಣ ಪ್ರದೇಶವಾದ ಜನಕಡ್ಕಲ್ ಕೋಟೆಬೈಲ್ ಮಾಳ್ಕೋಡ, ಇಡಗುಂಜಿ ಭಾಗದವರು ಪ್ರಯಾಣಕ್ಕೆ ಬಸ್‌ಗಳನ್ನೇ ಅವಲಂಬಿಸಿಕೊAಡಿದ್ದು ಈ ಭಾಗಕ್ಕೆ ಸಮರ್ಪಕವಾಗಿ ಬಸ್ ವ್ಯವಸ್ಥೆ ಇಲ್ಲ. ಇದರಿಂದ ಈ ಭಾಗದ ವಿದ್ಯಾರ್ಥಿಗಳು, ಸಾರ್ವಜನಿಕರು ಪಟ್ಟಣಕ್ಕೆ ಆಗಮಿಸಲು ಸಂಕಷ್ಟ ಅನುಭವಿಸುತ್ತಿದ್ದಾರೆ. ತಾಲೂಕಿನ ಕಾಸರಕೋಡು ಒಳ ರಸ್ತೆಯಲ್ಲಿ ಸಂಚರಿಸುತ್ತಿರುವAತಹ ಬಸ್ ಈಗ ಪ್ರವೇಶಿಸದೇ ರಾಷ್ಟ್ರೀಯ ಹೆದ್ದಾರಿಯ ಮೂಲಕ ಸಾಗುವುದರಿಂದ ಈ ಭಾಗದ ಕಳಸನಮೋಟೆ ಕೋಟೆಹಿತ್ಲು, ಮಲಮಸಿಕೇರಿ, ಮಲಬಾರ್ ಕೇರಿಯವರು ೨ ರಿಂದ ೩ ಕೀ.ಮೀ. ನಡೆದುಕೊಂಡು ಸಾಗಬೇಕಿದೆ. ಈ ಭಾಗದಲ್ಲಿ ಮೊದಲಿನ ರೀತಿಯ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ತಹಶೀಲ್ದಾರಿಗೆ ಮನವಿ ಸಲ್ಲಿಸಿದರು. ಸಮಸ್ಯೆ ಬಗೆಹರಿಯದೇ ಹೋದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಜೊತೆ ಕರವೇ ಸಂಘಟನೆಯ ನೇತೃತ್ವದಲ್ಲಿ, ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಕರವೇ ತಾಲೂಕು ಅಧ್ಯಕ್ಷ ಮಂಜುನಾಥ ಗೌಡ ಎಚ್ಚರಿಸಿದರು.
ಗ್ರೇಡ್ ೨ ತಹಶೀಲ್ದಾರ ಉಷಾ ಪಾವಸ್ಕರ್ ಮನವಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಘಟಕದ ಅಧ್ಯಕ್ಷ ನಿಖಿಲ್ ನಾಯ್ಕ. ಸಾಲ್ಕೋಡ್ ಗ್ರಾ.ಪಂ.ಉಪಾಧ್ಯಕ್ಷ ಸಚಿನ್ ನಾಯ್ಕ ಕಾರ್ಯದರ್ಶಿ ಶಿವಪ್ರಸಾದ್ ಗೌಡ ತರುಣ್ ನಾಯ್ಕ್ ಮತ್ತು ಇತರ ಕರವೇ ಸದಸ್ಯರು ಹಾಜರಿದ್ದರು,

error: