April 25, 2024

Bhavana Tv

Its Your Channel

9284.14 ಲಕ್ಷ ರೂ.ಗಳ ಹೊನ್ನಾವರ ತಾಲೂಕ ಪಂಚಾಯತ ಆಯವ್ಯಯ ಅನುಮೋದನೆ:- ವಿನೋದ ಅಣ್ವೇಕರ್

ಹೊನ್ನಾವರ:-ಮಂಗಳವಾರ ನಡೆದ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ 2022- 23ನೇ ಸಾಲಿನ ತಾಲೂಕ ಪಂಚಾಯತ್ ಆಯವ್ಯಯ ಮಂಡಿಸಿ ಅನುಮೋದನೆ ಪಡೆಯಲಾಗಿದೆ ಎಂದು ಹೊನ್ನಾವರ ತಾಲೂಕ ಪಂಚಾಯತ ಆಡಳಿತ ಅಧಿಕಾರಿಗಳು ಹಾಗೂ ಮುಖ್ಯ ಯೋಜನಾಧಿಕಾರಿಗಳು ಜಿಲ್ಲಾ ಪಂಚಾಯತ್ ಉತ್ತರ ಕನ್ನಡ ಕಾರವಾರ ರವರು ತಿಳಿಸಿದರು.

    ತಾಲೂಕು ಪಂಚಾಯತ್ ಸಭಾಭವನದಲ್ಲಿ ನಡೆದ ಸಾಮಾನ್ಯಸಭೆಯಲ್ಲಿ ತಾಲೂಕು ಪಂಚಾಯಿತಿ ಅಡಿ ಬರುವ ವಿವಿಧ ಇಲಾಖೆಗಳ ಆಯವ್ಯಯ ಮಂಡಿಸಿ ಪ್ರಸಕ್ತ ಸಾಲಿನಲ್ಲಿ 100% ರಷ್ಟು ಅನುದಾನ ಸದ್ಬಳಕೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು. ಶಾಲಾ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕಾ ಕಾರ್ಯಕ್ರಮ ಪ್ರವಾಹ ಮತ್ತು ಪ್ರಕೃತಿ ವಿಕೋಪ ನಿಯಂತ್ರಣ ಕ್ರಮಗಳು, ಅರಣ್ಯೀಕರಣ, ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ, ಕೃಷಿ ಬಿತ್ತನೆ ಕಾರ್ಯ, ನರೇಗಾ ಯೋಜನೆಯಡಿ ವಿವಿಧ ಕಾರ್ಯಚಟುವಟಿಕೆಗಳು, ವಿದ್ಯಾರ್ಥಿಗಳಿಗೆ ಬಸ್ ಪಾಸ್ ಪೂರೈಕೆ ಸೇರಿದಂತೆ ಆರೋಗ್ಯ, ಕೃಷಿ, ಶಿಕ್ಷಣ, ತೋಟಗಾರಿಕೆ, ಪಶುಸಂಗೋಪನೆ, ಪಂಚಾಯತ್ ರಾಜ್ ಇಂಜಿನಿಯರಿAಗ್, ಹೆಸ್ಕಾಂ ಮುಂತಾದ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾರ್ಗದರ್ಶನ ನೀಡಿದರು.

ಸಭೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ನಾಯ್ಕ ಉಪಸ್ಥಿತರಿದ್ದು ಕಳೆದ ಸಾಲಿನಲ್ಲಿ ತಾಲೂಕಿನ ಎಲ್ಲಾ ಅಧಿಕಾರಿಗಳು ಕಾರ್ಯದಕ್ಷತೆಯಿಂದ ಕಾರ್ಯನಿರ್ವಹಿಸಿ ತಾಲೂಕಿಗೆ ಬಿಡುಗಡೆಯಾದ ಸಂಪೂರ್ಣ ಅನುದಾನ ಸದ್ಬಳಕೆಯಾಗಿ ಪ್ರಗತಿ ಸಾಧಿಸಿದ್ದು ಪ್ರಸಕ್ತ ಸಾಲಿನಲ್ಲಿಯೂ ಶೇಕಡಾ ನೂರರಷ್ಟು ಪ್ರಗತಿ ಸಾಧಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು. ತಾಲೂಕು ಪಂಚಾಯತ್ ಸಹಾಯಕ ಲೆಕ್ಕಾಧಿಕಾರಿ ಶ್ಯಾಮಲಾ ನಾಯಕ್ ಆಯವ್ಯಯ ಮಂಡಿಸಿದರು. ತಾಲೂಕು ಪಂಚಾಯತ್ ಸಿಬ್ಬಂದಿ ಬಾಲಚಂದ್ರ ನಾಯ್ಕ ಸ್ವಾಗತಿಸಿದರು. ಸಿಬ್ಬಂದಿ ಹನುಮಂತ ಗೌಡ ವಂದಿಸಿದರು.

error: