May 19, 2024

Bhavana Tv

Its Your Channel

ಮಣಿಪಾಲ ಆರೋಗ್ಯಕಾರ್ಡ್ 2022ರ ನೋಂದಾವಣಿ ಪ್ರಕ್ರಿಯೆ ಗೆ ಚಾಲನೆ

ಹೊನ್ನಾವರ, 14 ಜುಲೈ 2022: ಮಣಿಪಾಲ್ ಆರೋಗ್ಯ ಕಾರ್ಡ್ 2022ರ ನೋಂದಣಿ ಪ್ರಾರಂಭವಾಗಿದೆ. ಮಣಿಪಾಲ್ ಆರೋಗ್ಯಕಾರ್ಡ್ (ಎಮ್‌ಎಸಿ) ಅನ್ನು ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಉದ್ದೇಶದಿಂದ ಪ್ರಾರಂಭಿಸಲಾಗಿದೆ. ಇದು ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿ ನೀಡುತ್ತದೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. ಕಾರ್ಡ್ ಖರೀದಿಸಲು ಹೂಡಿಕೆ ಮಾಡಿದ ಹಣವನ್ನು ಕೇವಲ ಎರಡು ಅಥವಾ ಮೂರು ಕಾರ್ಡ್ ಬಳಕೆಗಳಲ್ಲಿ ರಿಯಾಯಿತಿಯ ರೂಪದಲ್ಲಿ ಹಿಂಪಡೆಯಬಹುದು. “ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ” ಎಂಬುದು ಮಣಿಪಾಲ್ ಆರೋಗ್ಯಕಾರ್ಡ್ ನ ದ್ಯೇಯ ವಾಕ್ಯ. ಅವಿಭಾಜಿತ ದಕ್ಸಿಣ ಕನ್ನಡ ಜಿಲ್ಲೆಯ ಜನರಿಗೆ ಆರಂಭಿಸಿದ ಈ ಯೋಜನೆ ಇಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾವೇರಿ ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಬಳ್ಳಾರಿ ಸೇರಿದಂತೆ ಕರಾವಳಿ ಕರ್ನಾಟಕದ ಮತ್ತು ಮಧ್ಯ ಕರ್ನಾಟಕದ ಸುಮಾರು 12ಕ್ಕೂ ಹೆಚ್ಚು ಜಿಲ್ಲೆಗಳಿಗೆ ವಿಸ್ತರಣೆ ಅಲ್ಲದೇ ಕೇರಳ, ಗೋವಾದಂತಹ ನೆರೆ ರಾಜ್ಯಗಳಿಗೂ ವಿಸ್ತರಣೆ ಆಗಿದೆ. ಸದಸ್ಯತ್ವ ಶುಲ್ಕವಾಗಿ ಒಂದು ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ ಯಾರಾದರೂ ಸದಸ್ಯತ್ವವನ್ನು ಪಡೆಯಬಹುದು ಮತ್ತು ಅವರು ಕಾರ್ಡಿನ ಕೇವಲ ಎರಡು ಅಥವಾ ಮೂರು ಬಳಕೆಗಳಲ್ಲಿ ರಿಯಾಯಿತಿಗಳ ರೂಪದಲ್ಲಿ ಅವರ ಹೂಡಿಕೆಯನ್ನು ಮರಳಿ ಪಡೆಯಬಹುದಾಗಿದೆ” ಎಂದು ಅವರು ಹೇಳಿದರು.

ಮಣಿಪಾಲ್ ಆರೋಗ್ಯ ಕಾರ್ಡ್ 2022ರ ಯೋಜನೆಯು “ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ರೂ 300 / -, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ರೂ 600/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ರೂ 750/-. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ರೂ 500/-, ಕುಟುಂಬಕ್ಕೆ ರೂ 800/- ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ರೂ 950/- ಆಗಿರುತ್ತದೆ.

ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಈ ಕೆಳಗಿನ ರಿಯಾಯಿತಿ ಸೌಲಭ್ಯ ಪಡೆಯಬಹುದು,
ಹೊರ ರೋಗಿ ವಿಭಾಗದಲ್ಲಿ ಒಳ ರೋಗಿ ವಿಭಾಗದಲ್ಲಿ

*ತಜ್ಞ ಅಥವಾ ಸೂಪರ್ ಸ್ಪೆಷಲಿಸ್ಟ್ ವೈದ್ಯರ ಸಮಾಲೋಚನೆ ಯಲ್ಲಿ ಶೇಕಡಾ 50 ರಿಯಾಯಿತಿ
*ಪ್ರಯೋಗಾಲಯ ಪರೀಕ್ಷೆ ಯಲ್ಲಿ ಶೇಕಡಾ 30 ರಿಯಾಯಿತಿ
*ಸಿ ಟಿ, ಎಂ ಆರ್ ಐ, ಅಲ್ಟ್ರಾಸೌಂಡ್ ಗಳಲ್ಲಿ ಶೇಕಡಾ 20 ರಿಯಾಯಿತಿ
*ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇಕಡಾ 20 ರಿಯಾಯಿತಿ
*ಔಷಧಾಲಯಗಳಲ್ಲಿ ಶೇಕಡಾ 12ರವರೆಗೆ ರಿಯಾಯಿತಿ
*ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ ಶೇಕಡಾ 25 ರಿಯಾಯಿತಿ
*ಕೋವಿಡ್ ರೋಗಿಗಳಿಗೆ ಜನರಲ್ ವಾರ್ಡ್ ನಲ್ಲಿ ರೋಗಿಗಳಿಗೆ ಸರ್ಕಾರ ಅನುಮೋದಿತ ಪ್ಯಾಕೇಜ್ ಮೇಲೆ ಶೇಕಡಾ 10 ರಿಯಾಯಿತಿ.

ಕಾರ್ಡ್ ಹೊಂದಿರುವವರು ಕರಾವಳಿ ಕರ್ನಾಟಕ ಮತ್ತು ಗೋವಾದ ಮಣಿಪಾಲ್ ಗ್ರೂಪ್ ಆಸ್ಪತ್ರೆಗಳಿಗೆ ಈ ಯೋಜನೆ ಅನ್ವಯಿಸುತ್ತದೆ. ಇದರಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ.ಟಿ.ಎಂ.ಎ ಪೈ ಆಸ್ಪತ್ರೆ ಉಡುಪಿ ಮತ್ತು ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ಕೆಎಂಸಿ ಆಸ್ಪತ್ರೆ ಅತ್ತಾವರ ಮತ್ತು ಅಂಬೇಡ್ಕರ್ ಸರ್ಕಲ್ ಮಂಗಳೂರು ಮತ್ತು ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ ಕಟೀಲ್ ಮತ್ತು ಮಣಿಪಾಲ್ ಆಸ್ಪತ್ರೆ ಗೋವಾ, ಮಣಿಪಾಲ ಮತ್ತು ಮಂಗಳೂರಿನಲ್ಲಿರುವ ದಂತ ಚಿಕಿತ್ಸಾ ಆಸ್ಪತ್ರೆಗಳಲ್ಲಿ ರಿಯಾಯಿತಿ ಪ್ರಯೋಜನಗಳನ್ನು ಪಡೆಯಬಹುದು. ಮಣಿಪಾಲ ಆರೋಗ್ಯ ಕಾರ್ಡ್ ನ್ನು ಒಂದು ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದು.

ಪತ್ರಿಕಾಗೋಷ್ಟಿಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವ್ಯವಸ್ಥಾಪಕರಾದ ಶ್ರೀ ಮೋಹನ್ ಶೆಟ್ಟಿ, ಮತ್ತು ಮಾರುಕಟ್ಟೆ ವಿಭಾಗದ ಪ್ರತಿನಿಧಿಯಾದ ಶ್ರೀ ಶ್ರೀನಿವಾಸ್ ಭಾಗವತ್, ಕಸ್ತೂರ್ಬಾ ಆಸ್ಪತ್ರೆ ಮಾಹಿತಿ ಕೇಂದ್ರದ ಶ್ರೀ ಜಿ ಯು ಭಟ್ ಮತ್ತು ಮಿಲಾಗ್ರಿಸ್ ಬ್ಯಾಂಕ್ ನ ಅಪ್ಪಣ್ಣ ಇವರೆಲ್ಲರೂ ಉಪಸ್ಥಿತರಿದ್ದರು.

2022ರ ನೋಂದಾವಣಿಗಾಗಿ ಅರ್ಜಿಗಳು ಕೆಳಕಂಡ ಅಧಿಕೃತ ಪ್ರತಿನಿಧಿಗಳ ಬಳಿ ಲಭ್ಯವಿದೆ:

*ಜಿ.ಯು. ಭಟ್, ಕಸ್ತೂರಬಾ ಆಸ್ಪತ್ರೆ ಮಾಹಿತಿ ಕೇಂದ್ರ, ಹೊನ್ನಾವರ – 9945538179
*ಸೇಂಟ್ ಮಿಲಾಗ್ರೆಸ್ ಕ್ರೆಡಿಟ್ ಸೌಹಾರ್ದ ಕೋ-ಆಪ್. ಲಿಮಿಟೆಡ್: ಹೊನ್ನಾವರ – 9538883674, ಮಂಕಿ – 9538894591 * ಶಿವಕುಮಾರ್ – 9448575752, *ಉಮೇಶ್ ಜಿ. ಎನ್. – 9481953503

error: