May 17, 2024

Bhavana Tv

Its Your Channel

ವಿದ್ಯಾರ್ಥಿ ಜೀವನದಲ್ಲಿ ಪರಿಶ್ರಮ ವಹಿಸಿದರೆ ಶೈಕ್ಷಣಿಕ ಸಾಧನೆ ಮಾಡಬಹುದು- ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ನಾಯ್ಕ

ಹೊನ್ನಾವರ: ವಿದ್ಯಾರ್ಥಿ ಜೀವನದಲ್ಲಿ ಪರಿಶ್ರಮ ವಹಿಸಿದರೆ ಶೈಕ್ಷಣಿಕ ಸಾಧನೆ ಮಾಡಬಹುದು. ಇತ್ತೀಚೀನ ದಿನದಲ್ಲಿ ಸಾಧಕರನ್ನು ಸಮಾಜ ಪೊತ್ಸಾಹಿಸುವ ಕಾರ್ಯ ಪ್ರಶಂಸಾರ್ಹ ಎಂದು ಹೊನ್ನಾವರ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ನಾಯ್ಕ ಅಭಿಪ್ರಾಯಪಟ್ಟರು.

ಅವರು ತಾಲೂಕ ನಾಮಧಾರಿ ಅಭಿವೃದ್ಧಿ ಸಂಘದ ವತಿಯಿಂದ ನಾಮಧಾರಿ ವಿದ್ಯಾರ್ಥಿ ನಿಲಯದಲ್ಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಶಿಕ್ಷಣ ಪಡೆಯಲು ಬಡವ ಶ್ರೀಮಂತ ಎನ್ನುವ ಭೇದವಿಲ್ಲ. ವಿದ್ಯಾರ್ಥಿಗಳ ಪರಿಶ್ರಮ ಕುಟುಂಬದವರ ಪೊತ್ಸಾಹವಿದ್ದರೆ ಉತ್ತಮ ಶಿಕ್ಷಣ ಪಡೆಯಬಹುದು. ಪ್ರತಿಭಾವಂತರನ್ನು ಗುರುತಿಸಿ ಪೊತ್ಸಾಹಿಸುವ ಕಾರ್ಯ ಸಮಾಜ ಮಾಡುತ್ತಾ ಬಂದಿದೆ. ನಾಮಧಾರಿ ಸಮಾಜ ದೊಡ್ಡ ಸಮಾಜವಾದರೂ ನಿರೀಕ್ಷೀತ ಪ್ರಮಾಣದಲ್ಲಿ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ. ಎಲ್ಲರು ಒಗ್ಗಟ್ಟಾಗಿ ಪಡೆಯೋಣ ಎಂದರು.
2020-21 ಹಾಗೂ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿಯಲ್ಲಿ ಸಾಧನೆ ಮಾಡಿದ 166 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ತಾಲೂಕ ನೌಕರರ ಸಂಘದ ಅಧ್ಯಕ್ಷ ಆರ್.ಟಿ.ನಾಯ್ಕ ಮಾತನಾಡಿ ಶಿಕ್ಷಣದಲ್ಲಿ ಹಲವು ಬಗೆಯ ಅವಕಾಶವಿದ್ದು, ಆಸಕ್ತ ವಿಷಯ ಆಯ್ಕೆ ಮಾಡಿಕೊಂಡು ಅಧ್ಯಯನ ಮಾಡಬೇಕಿದೆ. ಇಂದು ದುಶ್ಚಟದತ್ತ ಯುವ ಸಮುದಾಯ ಹೋಗುತ್ತಿದ್ದು, ಪಾಲಕರು ಈ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ ಎಂದರು.
ತಾಲೂಕ ನಾಮಧಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸುಧೀಶ ನಾಯ್ಕ ಮಾತನಾಡಿ ಜೀವನದಲ್ಲಿ ಗುರಿ ಇಟ್ಟುಕೊಂಡು ಆ ನಿಟ್ಟಿನಲ್ಲಿ ಪ್ರಯತ್ನ ನಡೆಸಿದರೆ ಸಾಧನೆ ಮಾಡಬಹುದು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪೊತ್ಸಾಹಿಸುವ ಕಾರ್ಯ ಸಮಾಜ ಮಾಡುತ್ತಿದ್ದು, ಉತ್ತಮ ವ್ಯಕ್ತಿಗಳಾದ ಬಳಿಕ ಸಮಾಜಕ್ಕೆ ಸೇವೆ ಸಲ್ಲಿಸುವ ಗುಣ ರೂಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾಜದ ತಾಲೂಕ ಅಧ್ಯಕ್ಷ ಮಂಜುನಾಥ ನಾಯ್ಕ ವಹಿಸಿದ್ದರು.
ಮಾಜಿ.ಜಿ.ಪಂ.ಸದಸ್ಯೆ ಪುಷ್ಪಾ ನಾಯ್ಕ, ಸಂಘದ ಪ್ರಧಾನ ಕಾರ್ಯದರ್ಶಿ ವಾಮನ ನಾಯ್ಕ, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಘಟನೆಯ ಉಪಾಧ್ಯಕ್ಷ ಟಿ.ಟಿ.ನಾಯ್ಕ ಸ್ವಾಗತಿಸಿ,ಸಿವಿಲ್ ಗುತ್ತಿಗೆದಾರ ಸಂಘದ ಅಧ್ಯಕ್ಷ ರಾಮಪ್ಪ ನಾಯ್ಕ ವಂದಿಸಿದರು. ವಕೀಲರಾದ ಕೆ.ಆರ್.ನಾಯ್ಕ ವರದಿ ಮಂಡಿಸಿ, ಶಿಕ್ಷಕ ಮೋಹನ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು.
ಸಮಾಜದ ವಿವಿಧ ವಿಭಾಗದ ಪದಾಧಿಕಾರಿಗಳು ಸದಸ್ಯರು, ಸಾರ್ವಜನಿಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

error: