April 25, 2024

Bhavana Tv

Its Your Channel

ಎಸ್. ಡಿ. ಎಮ್ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ 75ನೇ ಸ್ವಾತಂತ್ರ‍್ಯದ ಅಮೃತ ಮಹೋತ್ಸವದ ಆಚರಣೆ

ಹೊನ್ನಾವರ: ಎಸ್ .ಡಿ .ಎಮ್ ಪದವಿ ಪೂರ್ವ ಕಾಲೇಜಿನಲ್ಲಿ 75ನೇ ವರ್ಷದ ಸ್ವಾತಂತ್ರ‍್ಯೋತ್ಸವವನ್ನು ಸಂಭ್ರಮದಿAದ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಚಾರ್ಯರಾದ ಎಂ .ಎಚ್ .ಭಟ್ ಅವರು ಧ್ವಜಾರೋಹಣದ ಮೂಲಕ ಪ್ರಾರಂಭಿಸಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಕೃಷ್ಣಮೂರ್ತಿ ಭಟ್, ಕಾರ್ಯದರ್ಶಿಗಳಾದ ಎಸ್.ಎಂ .ಭಟ್, ನಿರ್ದೇಶಕರಾದ ಡಾ. ಎಂ. ಜಿ. ಹೆಗಡೆ ಅವರು ಮತ್ತು ಎಲ್ಲಾ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳು ಮತ್ತು ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

        ಈ ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಎಂ .ಎಚ್ .ಭಟ್ ಅವರು ಸ್ವಾತಂತ್ರ‍್ಯೋತ್ಸವದ ಕುರಿತು ಮಾತನಾಡಿದರು ಮತ್ತು ಅಧ್ಯಕ್ಷರಾದ ಕೃಷ್ಣಮೂರ್ತಿ ಭಟ್ ಅವರು ಭದ್ರ ದೇಶವನ್ನು ಕಟ್ಟೋಣ ಎಂಬ ಸಂದೇಶವನ್ನು ವಿದ್ಯಾರ್ಥಿಗಳಿಗೆ ನೀಡಿದರು. ನಂತರ ವಿದ್ಯಾರ್ಥಿಗಳು ದೇಶಭಕ್ತಿ ಗೀತೆ ,ಭಾಷಣವನ್ನು ಮಾಡಿದರು. ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ  ಗೀತ ಗಾಯನ, ಪ್ರಬಂಧ ಮತ್ತು ಭಾಷಣ ಸ್ಪರ್ಧೆಯನ್ನು ನಡೆಸಲಾಗಿದ್ದು, ಆ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು .ನಂತರ ವಿದ್ಯಾರ್ಥಿಗಳಿಗೆ ಸಿಹಿಯನ್ನು ಹಂಚಲಾಯಿತು .ವಿದ್ಯಾರ್ಥಿ ಒಕ್ಕೂಟದ ಸಂಚಾಲಕರಾದ ವಿನಾಯಕ್ ಭಟ್ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು.
error: