May 17, 2024

Bhavana Tv

Its Your Channel

ಶಿಕ್ಷಣ ನೀಡಿದ ಗುರುಗಳನ್ನು ಪ್ರತಿಯೊರ್ವರು ಗೌರವಿಸುವ ಗುಣವನ್ನು ನಾವೆಲ್ಲರು ಅಳವಡಿಸಿಕೊಳ್ಳಬೇಕು-ಶಾಸಕ ಸುನೀಲ ನಾಯ್ಕ

ಹೊನ್ನಾವರ: ”ಶಿಕ್ಷಣ ನೀಡಿದ ಗುರುಗಳನ್ನು ಪ್ರತಿಯೊರ್ವರು ಗೌರವಿಸುವ ಗುಣವನ್ನು ನಾವೆಲ್ಲರು ಅಳವಡಿಸಿಕೊಳ್ಳಬೇಕು” ಎಂದು ಶಾಸಕ ಸುನೀಲ ನಾಯ್ಕ ಹೇಳಿದರು.

ಜಿಲ್ಲಾಡಳಿತ, ಜಿ.ಪಂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ತಾಲೂಕಾಡಳಿತ, ತಾ.ಪಂ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹೊನ್ನಾವರ ಹಾಗೂ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಸೋಮವಾರ ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಗುಣಮಟ್ಟದ ಶಿಕ್ಷಣ, ಸಂಸ್ಕಾರ ನೀಡುವ ಶಿಕ್ಷಕರು ನಮಗೆಲ್ಲರಿಗೂ ಒಂದು ಶಕ್ತಿ. ಶಿಕ್ಷಕರು ಉತ್ತಮ ಸಮಾಜದ ನಿರ್ಮಾತೃಗಳಾಗಿದ್ದಾರೆ. ತಮ್ಮೆಲ್ಲಾ ಸರ್ವಸ್ವವನ್ನೂ ಧಾರೆ ಎರೆದು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಾರೆ. ಶಿಕ್ಷಕರ ಅಪಾರ ಕಾಳಜಿ, ಪ್ರೀತಿಯನ್ನು ನೀಡುವುದಕ್ಕೆ, ನಮ್ಮ ಗುರುಗಳಿಗೆ ವಂದಿಸುವ ಪರ್ವಕಾಲ ಇದಾಗಿದೆ. ಶಿಕ್ಷಣ ನೀಡಿದ ಗುರುಗಳನ್ನು ಗೌರವಿಸಬೇಕು ಮತ್ತು ಅವರನ್ನು ಎಂದಿಗೂ ನೆನಪಿಸುವ ಗುಣಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ನಾನು ಶಾಸಕನಾಗಿ ನಾಲ್ಕು ವರ್ಷ ಕಳೆದಿದ್ದು, ವಿವಿಧ ಇಲಾಖೆಯಲ್ಲಿ ಹಲವಾರು ಸಮಸ್ಯೆಗಳನ್ನು ಕೇಳಿದ್ದೇನೆ. ಆದರೆ ಈವರೆಗೂ ಶಿಕ್ಷಕರ ಸಮಸ್ಯೆ ಎದುರಾಗದೇ ಇರುವದು ಸಂತಸ ತಂದಿದೆ. ಶಿಕ್ಷಣಕ್ಕೆ ಅಗತ್ಯ ಇರುವ ಎಲ್ಲಾ ಸಹಾಯ ಸಹಕಾರವನ್ನು ನೀಡಲಾಗುವುದು ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶಿಕ್ಷಕರನ್ನು ಹಾಗೂ ವಿಶೇಷ ಸಾಧನೆ ಮಾಡಿದ ೧೦ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಬಹುಮುಖ ಪ್ರತಿಭೆಯ ಶಿಕ್ಷಕರಾದ ಯಶವಂತ ಮೇಸ್ತ, ಶಾರದಾ ಹೆಗಡೆ, ಕಲ್ಪನಾ ಶೇಟ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಬಾರಿಯ ಎಸ್.ಎಸ್.ಎಲ್.ಸಿ ಯಲ್ಲಿ ತಾಲೂಕಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು. ಶಿಕ್ಷಕರಿಗೆ ಆಯೋಜಿಸಿದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರನ್ನು ಇದೇ ವೇಳೆ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮ ಉದ್ದೇಶಿಸಿ ಸಿಪಿಐ ಶ್ರೀಧರ್ ಎಸ್.ಆರ್ ಮಾತನಾಡಿ ಒರ್ವ ವಿದ್ಯಾರ್ಥಿಗೆ ಶಿಕ್ಷಣ ಸಂಸ್ಕಾರದAತಹ ಗುಣವನ್ನು ಧಾರೆ ಎರೆದು ಸದೃಡ ಸಮಾಜದ ಮುಂದೆ ಜೀವನ ನಡೆಸಲು ಅಣೆಗೊಳಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ ಎಂದು ಶುಭಹಾರೈಸಿದರು.

ಅಂಕೋಲಾದ ಜೆ.ಸಿ.ಕಾಲೇಜಿನ ಡಾ. ಎಸ್.ವಿ.ವಸ್ತ್ರದ್ ಉಪನ್ಯಾಸ ನೀಡಿದರು.
ವೇದಿಕೆಯಲ್ಲಿ ತಹಶಿಲ್ದಾರ್ ನಾಗರಾಜ್ ನಾಯ್ಕಡ್, ತಾಪಂ ಇಒ ಸುರೇಶ ನಾಯ್ಕ, ಸಾಲ್ಕೋಡ್ ಗ್ರಾ.ಪಂ.ಅಧ್ಯಕ್ಷೆ ರಜನಿ ನಾಯ್ಕ, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ, ಸತೀಶ ನಾಯ್ಕ, ನೌಕರರ ಸಂಘದ ತಾಲೂಕಧ್ಯಕ್ಷ ಆರ್.ಟಿ.ನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಜಿ.ನಾಯ್ಕ, ಸಮನ್ವಯಾಧಿಕಾರಿ ಎಸ್.ಎಂ.ಹೆಗಡೆ, ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಸಿವರ್ಗಿಸ್, ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷೆ ಸಾಧನಾ ಬರ್ಗಿ, ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಮಹೇಶ ಶೆಟ್ಟಿ, ಕೃಷ್ಣ ಗೌಡ, ಶಿಕ್ಷಕರ ಸಂಘದ ಪದಾಧಿಕಾರಿಗಳು ಇತರರು ಉಪಸ್ಥಿತರಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ನಾಯ್ಕ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿ, ಶಿಕ್ಷಕ ಸುಧೀಶ ನಾಯ್ಕ ನಿರೂಪಿಸಿದರು. ಕೃಷ್ಣಮೂರ್ತಿ ಭಟ್ಟ ಶಿವಾನಿ ಅವರು ಸನ್ಮಾನದ ನೇತೃತ್ವ ವಹಿಸಿದ್ದರು.

error: