May 3, 2024

Bhavana Tv

Its Your Channel

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾಗಿ ಮಹಮದ್ ಝಕ್ರಿಯಾ ಶೇಖ್ ಪುನರ್ ನೇಮಕ

ಹೊನ್ನಾವರ : ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರನ್ನಾಗಿ, ಕಳೆದ ನಾಲ್ಕು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ, ಪಟ್ಟಣದ ಜೋಗಮಠ ನಿವಾಸಿ ಮಹಮದ್ ಝಕ್ರಿಯಾ ಶೇಖ್‌ಇವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾದ ಶ್ರೀಮಾನ ಅಬ್ದುಲ್‌ಜಬ್ಬಾರ ಸಾಹೇಬ ಅವರ ಸೂಚನೆಯ ಮೇರೆಗೆ, ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾದ ಅಬ್ದುಲ್ ಮಜೀದ್ ಶೇಖ್ ನೇಮಿಸಿ ಆದೇಶ ಹೊರಡಿಸಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್ ತೆಂಗೇರಿ ತಿಳಿಸಿದ್ದಾರೆ.

ಇತ್ತೀಚಿಗೆ ಶಿರಸಿಯ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಅಧಿಕಾರ ಪತ್ರವಿತರಿಸಿ ಪಕ್ಷ ನೀಡಿರುವ ಜವಾಬ್ದಾರಿಯನ್ನು ಸ್ವೀಕರಿಸಿ ಹೊನ್ನಾವರ ಬ್ಲಾಕ್ ವ್ಯಾಪ್ತಿಯಲ್ಲಿ ಪಕ್ಷವನ್ನು ಸಂಘಟಿಸಲು ಕಾರ್ಯ ಪ್ರವರ್ತರಾಗುವಂತೆ ಸೂಚಿಸಿದ್ದಾರೆ.ಅತ್ಯಂತ ಕ್ರೀಯಾಶೀಲರಾಗಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಪಕ್ಷವನ್ನು ಸಂಘಟಿಸುತ್ತಿರುವ, ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾದ ಮಹಮದ್ ಝಕ್ರಿಯಾ ಶೇಖ್ ಇವರನ್ನು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಅಭಿನಂದಿಸಿದ್ದಾರೆ.
error: