April 25, 2024

Bhavana Tv

Its Your Channel

ಜಿಲ್ಲಾ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಗೇರಸೊಪ್ಪ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳ ಉತ್ತಮ ಸಾಧನೆ

ಹೊನ್ನಾವರ ತಾಲೂಕಿನ ಎಸ್.ಡಿ.ಎಮ್ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ಮಕ್ಕಳ ಇಲಾಖಾ ಕ್ರೀಡಾಕೂಟದಲ್ಲಿ ಹೊನ್ನಾವರ ತಾಲೂಕಿನ ಸರಕಾರಿ ಪ್ರೌಢ ಶಾಲೆ ಗೇರಸೊಪ್ಪ ವಿದ್ಯಾರ್ಥಿಗಳಾದ ಬಾಲಕಿಯರ ವಿಭಾಗದಲ್ಲಿ ಕುಮಾರಿ ದೀಕ್ಷಿತಾ ಎಮ್ ನಾಯ್ಕ ಮತ್ತು ಸಂಜನಾ ಎಮ್ ನಾಯ್ಕ ಚದುರಂಗ ಸ್ಪರ್ಧೆಯಲ್ಲಿ ಭಾಗವಹಿಸಿ ಜಿಲ್ಲಾಮಟ್ಟದಲ್ಲಿ ಪ್ರಥಮ & ತೃತೀಯ ಸ್ಥಾನವನ್ನು ಹಾಗೂ ಬಾಲಕರ ವಿಭಾಗದಲ್ಲಿ ನಿಖಿಲ್ ಎಚ್ ನಾಯ್ಕ ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈ ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಕಾಶ ಎನ್ ನಾಯ್ಕ ಇವರು ಮಾರ್ಗದರ್ಶನವನ್ನು ನೀಡಿದ್ದರು. ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಉತ್ತಮ ಸಾಧನೆಗೈದಿರುವ ವಿದ್ಯಾರ್ಥಿಯರಿಗೆ ಶಾಲೆಯ ಮುಖ್ಯ ಶಿಕ್ಷಕರಾದ ಡಾ. ವಸಂತ ಎನ್ ಶೇಟ್ ಹಾಗೂ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿ ಮುಂದಿನ ಹಂತಕ್ಕೆ ಶುಭವನ್ನು ಕೋರಿದ್ದಾರೆ.

error: