May 14, 2024

Bhavana Tv

Its Your Channel

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠಗಾಯನ

??????

ಹೊನ್ನಾವರದ ಎಂ.ಪಿ.ಇ ಸೊಸೈಟಿಯ ಎಸ್. ಡಿ .ಎಮ್ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಕರ್ನಾಟಕ ಸರ್ಕಾರದ ಅಧಿಸೂಚನೆಯಂತೆ 2022ನೇ ಸಾಲಿನ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಎಂ.ಎಚ್. ಭಟ್ ರವರು ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಾಸ್ತಾವಿಕನುಡಿಗಳನ್ನಾಡಿದರು .ನಂತರ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರುಗಳು ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಮೂಡಿಸುವ ಗೀತಕವನಗಳಾದ ನಾಡಗೀತೆ ,ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ ,ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ವಿದ್ಯಾ ಚೇತನ ಮತ್ತು ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಗೀತೆಗಳನ್ನು ಬೆಳಿಗ್ಗೆ 11 ಗಂಟೆಯಿAದ ಪ್ರಸ್ತುತಪಡಿಸಿದರು.

ಈ ಕಾರ್ಯಕ್ರಮದಲ್ಲಿ ನಮ್ಮ ಕಾಲೇಜಿನ ಪ್ರಾಚಾರ್ಯರು ,ಉಪನ್ಯಾಸಕರುಗಳು ,ವಿದ್ಯಾರ್ಥಿಗಳು ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

error: