May 2, 2024

Bhavana Tv

Its Your Channel

ಬಿ.ಎ. ಪರೀಕ್ಷೆಯಲ್ಲಿ ಎಸ್.ಡಿ.ಎಂ. ವಿದ್ಯಾರ್ಥಿಗಳ ಸಾಧನೆ

ಹೊನ್ನಾವರ    :-ಕ.ವಿ.ವಿ. ಧಾರವಾಡ ಇವರು ನಡೆಸಿದ ಬಿ.ಎ. ೬ ನೇ ಸೆಮಿಸ್ಟರ್‌ನ ಪರೀಕ್ಷೆಯಲ್ಲಿ ಎಂ. ಪಿ. ಇ. ಸೊಸೈಟಿಯ ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯದ ಬಿ.ಎ. ೬ ನೇ ಸೆÀಮಿಸ್ಟರ್‌ನ ೧೮ ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿ, ೧ ವಿದ್ಯಾರ್ಥಿ ಪ್ರಥಮ ಶ್ರೇಣಿಯಲ್ಲಿ ಹಾಗೂ ೧ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗುವುದರ ಮೂಲಕ ಶೇ ೮೬.೯೬ ಫಲಿತಾಂಶ ದಾಖಲಾಗಿದೆ.    

ಶಿವರಾಜ ಶಿಳ್ಳಿಕ್ಯಾತರ್ ೮೮.೧೨%, ಭಾಗ್ಯಶ್ರೀ ನಾಯ್ಕ ೮೭.೪೪% ಹಾಗೂ ಗಾನಾ ಭಂಡಾರಿ ೮೨.೫೫% ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಪ್ರಾಚಾರ್ಯರಾದ ಡಾ. ವಿಜಯಲಕ್ಷಿö್ಮ ನಾಯ್ಕ, ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಹಾಗೂ ಎಲ್ಲಾ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

error: