
ಹೊನ್ನಾವರ ತಾಲೂಕಿನ ಕಾಸರಕೋಡ ಸಮೀಪ ಇಕೋ ಬೀಚ್ ಬಳಿ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಮೃತ ಪೊಲೀಸ್ ಸಿಬ್ಬಂದಿ 32 ವರ್ಷದ ರಾಮ ನಾಗೇಶ ಗೌಡ(32) ಎಂದು ತಿಳಿದು ಬಂದಿದೆ. ಕುಮಟಾ ತಾಲೂಕಿನ ನಾಡುಮಾಸ್ಕೇರಿ ಮೂಲದವರಾಗಿದ್ದು 2017 ರ ಸಾಲಿನಲ್ಲಿ ಪೊಲೀಸ್ ಇಲಾಖೆಗೆ ನೇಮಕಗೊಂಡಿದ್ದರು. ಆನೈಲ್ ಆಟ, ಹಾಗೂ ಸಾಲ ಮಾಡಿಕೊಂಡಿದ್ದರು. ಸಾಲದ ಭಾದೆಯು ಘಟನೆಗೂ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಕಳೆದ ಐದು ದಿನಗಳಿಂದ ಮನೆಯಲ್ಲಿ ಇರದೇ ಇಲಾಖೆಯಲ್ಲಿ ಕರ್ತವ್ಯಕ್ಕೂ ಹಾಜರಾಗಿರಲಿಲ್ಲ ಎನ್ನುವ ಮಾಹಿತಿ ತಿಳಿದುಬಂದಿದೆ. ಮಂಗಳವಾರ ಮುಂಜಾನೆ ಸಮಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕೇಸರಿ ಬಣ್ಣದ ಶರ್ಟ್ ಹಾಗೂ ಕಪ್ಪು ಬಣ್ಣದ ಜಿನ್ಸ್ ಪ್ಯಾಂಟ್ ಧರಿಸಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಸಮೀಪದಲ್ಲಿ ಬ್ಯಾಗ ಕೂಡ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಕಾರಣ ಏನೆಂದು ಪತ್ರದಲ್ಲಿ ಬರೆದಿದ್ದು, ಮೊಬೈಲ್ ಪರ್ಸ, ನೈಲಾನ್ ಹಗ್ಗವು ದೊರೆತಿದೆ. ಸ್ಥಳಕ್ಕೆ ಹೊನ್ನಾವರ ಪಿಎಸೈ ಪ್ರವೀಣಕುಮಾರ, ಹಾಗೂ ಆರ್.ಎಫ್.ಓ ವಿಕ್ರಂ ರೆಡ್ಡಿ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ..

More Stories
ಜಿಲ್ಲಾ ಮಟ್ಟದ ರಾಮಕ್ಷತ್ರೀಯ ಸಮಾಜದ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾವಳಿ
ಕನ್ನಡ ಕಾರ್ತಿಕ 2024ರ ಅನುದಿನ ಅನುಸ್ಪಂದನ
ಹಿಂದುಳಿದ ನಾಯಕ ಬಿಕೆ ಹರಿಪ್ರಸಾದ್ ಅವರ ಬಗ್ಗೆ ನಾಲಗೆ ಹರಿಬಿಟ್ಟ ಹರೀಶ್ ಪೂಂಜಾ ಸಾರ್ವಜನಿಕ ಜೀವನದಲ್ಲಿರಲು ಯೋಗ್ಯರಲ್ಲ :ಮಂಜುನಾಥ ನಾಯ್ಕ