May 4, 2024

Bhavana Tv

Its Your Channel

ಮಾರ್ಚ 1 ಕ್ಕೆ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಹೊನ್ನಾವರ ಶಾಖೆ ಕರೆ

ಹೊನ್ನಾವರ: ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿಯೋಜನೆಯನ್ನು ಜಾರಿಗೊಳಿಸಲು ಸರ್ಕಾರವನ್ನು ಆಗ್ರಹಿಸಿ ದಿನಾಂಕ: 01-03-2023 ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಶಾಖೆ ಹೊನ್ನಾವರ ಕರೆ ನೀಡಿದೆ

        ದಿನಾಂಕ : 21-02-2023 ರಂದು ಜರುಗಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆ ತಾಲ್ಲೂಕು ಯೋಜನಾ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷರು-ಪದಾಧಿಕಾರಿಗಳ “ತುರ್ತು ರಾಜ್ಯ ಕಾರ್ಯಕಾರಿಣಿ ಸಭೆ” ಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿಯ ಯೋಜನೆಯನ್ನು ಜಾರಿಗೊಳಿಸುವಂತೆ ಸರ್ಕಾರಕ್ಕೆ ಆಗ್ರಹಪಡಿಸಿ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ದಿನಾಂಕ: 01-03-2023 ರಿಂದ  'ಅನಿರ್ಧಿಷ್ಟಾವಧಿ ಮುಷ್ಕರ'ಕ್ಕೆ ಕರೆ ನೀಡಲು 8000 ಚುನಾಯಿತ ಪ್ರತಿನಿಧಿಗಳ ಸಮ್ಮುಖದಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಂಡಿದೆ.

ದಿನಾAಕ: 01-03-2023 ರಿಂದ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ‘ಅನಿರ್ಧಿಷ್ಟಾವಧಿ ಮುಷ್ಕರ’ವನ್ನು ಬೆಂಬಲಿಸುವುದೊAದರಿಗೆ ಯಶಸ್ವಿಗೊಳಿಸಲು ಹೊನ್ನಾವರ ತಾಲ್ಲೂಕು, ಶಾಖೆಯ ಎಲ್ಲಾ ಸರ್ಕಾರಿ ಅಧಿಕಾರಿ-ನೌಕರರಲ್ಲಿ ಮನವಿ ಮಾಡಿದೆ.

error: