April 25, 2024

Bhavana Tv

Its Your Channel

ರಾಜ್ಯದ ಮಂತ್ರಿಮ0ಡಲದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕರವೇ ಹೊನ್ನಾವರ ತಾಲೂಕಾಧ್ಯಕ್ಷ ಮಂಜುನಾಥ ಗೌಡ ಆಗ್ರಹ

ಹೊನ್ನಾವರ: ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದಿಂದ ಒಂದು ಲಕ್ಷಕ್ಕೂ ಅಧಿಕ ಮತಗಳನ್ನು ಪಡೆದು ಎರಡನೇಬಾರಿ ಆಯ್ಕೆ ಆಗಿರುವ ಶಾಸಕ ಮಂಕಾಳು ವೈದ್ಯಾ ಅವರಿಗೆ ಈ ಬಾರಿಯ ರಾಜ್ಯದ ಮಂತ್ರಿಮ0ಡಲದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕರವೇ ಹೊನ್ನಾವರ ತಾಲೂಕಾಧ್ಯಕ್ಷ ಮಂಜುನಾಥ ಗೌಡ ಕಾಂಗ್ರೆಸ್ ಹೈಕಮಾಂಡ್ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಮತ್ತು ಕೆ. ಪಿ. ಸಿ. ಸಿ. ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರನ್ನು ಆಗ್ರಹಿಸಿದ ಮಂಜುನಾಥ ಗೌಡ ಅವರು ಉತ್ತರ ಕನ್ನಡ ಜಿಲ್ಲೆಯಿಂದ ಮೀನುಗಾರ ಜನಾಂಗಕ್ಕೆ ಸಚಿವ ಸಂಪುಟದಲ್ಲಿ ಈ ವರೆಗೆ ಪ್ರಾತಿನಿಧ್ಯ ಲಭ್ಯವಾಗದೇ ಇರುವ ಹಿನ್ನೆಲೆಯಲ್ಲಿ ಎರಡನೇಬಾರಿ ಅತ್ಯಧಿಕ ಮತ ಪಡೆದು ಜನಾದೇಶದ ಮೇರೆಗೆ ಆಯ್ಕೆಯಾಗಿರುವ ಶಾಸಕ ಮಂಕಾಳು ವೈದ್ಯರಿಗೆ ಈ ಬಾರಿಯ ಸಚಿವ ಸಂಪುಟದಲ್ಲಿ ಬಂದರು ಮತ್ತು ಮೀನುಗಾರಿಕಾ ಖಾತೆ ಅಥವಾ ಪ್ರವಾಸೋದ್ಯಮ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡುವಲ್ಲಿ ಪರಿಗಣಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ಈ ಹಿಂದೆ ಅವರು ಆಯ್ಕೆಯಾದ ಸಂದರ್ಭದಲ್ಲಿ ಸರ್ಕಾರದಿಂದ ಅತ್ಯಂತ ಹೆಚ್ಚು ಅನುದಾನಗಳನ್ನು ತಂದು ಅಭಿವೃದ್ಧಿಪಡಿಸುವಲ್ಲಿ ಸಫಲರಾಗಿದ್ದರು ಅದೇ ರೀತಿ ಈ ಬಾರಿ ಅವರಿಗೆ ಸಚಿವ ಸ್ಥಾನವನ್ನು ನೀಡಿದಲ್ಲಿ ಇನ್ನು ಹೆಚ್ಚಿನ ಅಭಿವೃದ್ಧಿ ಕಾರ್ಯ ಮಾಡಬಹುದು ಮತ್ತು ಕಳೆದ ಹಲವಾರು ವರ್ಷಗಳಿಂದ ಭಟ್ಕಳ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಾಸಕರಿಗೆ ಯಾವುದೇ ಸಚಿವ ಸಂಪುಟ ಸ್ಥಾನಮಾನ ದೊರೆತಿಲ್ಲ ಈಗ ಕಾಂಗ್ರೆಸ್ ಸರ್ಕಾರವು ಸಂಪೂರ್ಣ ಬಹುಮತದ ಬಂದಿರುವುದರಿ0ದ ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ಜನರ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಯ ದೃಷ್ಟಿಯಿಂದ ನೀಡಬೇಕೆಂದು ಕೋರಿದ್ದಾರೆ.

ರಾಜ್ಯದ ಕರಾವಳಿಯ ತೀರಗಳಲ್ಲಿ ಮೀನುಗಾರರು ಅನೇಕ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈವರೆಗೆ ಮೀನುಗಾರರಲ್ಲದವರು ಹೆಚ್ಚು ಅವಧಿಗೆ ಮೀನುಗಾರಿಕೆ ಸಚಿವರಾಗಿದ್ದರಿಂದ ಮೀನುಗಾರಿಕೆ ಕ್ಷೇತ್ರದಲ್ಲಿನ ಹಲವು ಸಮಸ್ಯೆಗಳು ಬಗೆಹರಿಯದೇ ಹಾಗೆಯೇ ಉಳಿದಿದೆ. ಈ ವರೆಗಿನ ಹಲವು ತಪ್ಪು ನೀತಿಗಳಿಂದ ಕರಾವಳಿ ಮೀನುಗಾರಿಕಾ ವಲಯವು ಇಂದು ಅಪಾಯ ಸ್ಥಿತಿಯಲ್ಲಿದೆ. ಇದರಿಂದ ಕರಾವಳಿ ತೀರಗಳ ಮೀನುಗಾರರ ಬದುಕು ಇಂದು ಸಂಕಷ್ಟದಲ್ಲಿದೆ. ಈ ಹಿನ್ನೆಲೆಯಲ್ಲಿ ಈ ಭಾಗದ ಮೀನುಗಾರ ಜನಾಂಗದ ಶಾಸಕರೊಬ್ಬರಿಗೆ ಮೀನುಗಾರಿಕೆ ಸಹಿತ ಈ ಭಾಗದ ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆಗಳನ್ನು ಬಗೆಹರಿಸಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಅಭಿವೃದ್ಧಿ ಕೈಗೊಳ್ಳಲು ಮತ್ತು ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಿ ಜಿಲ್ಲೆಯಲ್ಲಿ ಹೆಚ್ಚಿರುವ ನಿರುದ್ಯೋಗ ಸಮಸ್ಯೆ ಬಗೆಹರಿಸಲು ಸಾಧ್ಯವಾಗಬಹುದು ಎನ್ನುವ ಆಶಯವನ್ನು ಮಂಜುನಾಥ ಗೌಡ ಅವರು ವ್ಯಕ್ತಪಡಿಸಿದ್ದಾರೆ.

error: