
ಹೊನ್ನಾವರ ತಾಲೂಕಿನ ಅರೇಅಂಗಡಿಯ ಎಸ್ ಎಸ್ ಕೆ ಪಿ ಇಂಗ್ಲಿಷ್ ಮೀಡಿಯಂ ಸ್ಕೂಲನಲ್ಲಿ ಬೇಸಿಗೆ ರಜಾ ಶಿಬಿರಕ್ಕೆ ಕರಿಕಾನ ಪರಮೇಶ್ವರಿ ದೇವಾಲಯದ ಪ್ರಧಾನ ಅರ್ಚಕರಾದ ವೇ.ಸುಬ್ರಹ್ಮಣ್ಯ ಭಟ್ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.
ನಂತರ ಮಾತನಾಡಿ ದೈವದ ಆಣತಿಯಂತೆ ಗುರುಗಳ ಮಾರ್ಗದರ್ಶನದಲ್ಲಿ ಹಲವು ಚಟುವಟಿಕೆಗಳ ಮೂಲಕ ಮನಸ್ಸನ್ನು ಮುದಗೊಳಿಸುವ ಇಂತಹ ಶಿಬಿರದಲ್ಲಿ ಮಕ್ಕಳು ಭಾಗವಹಿಸಿ ಜ್ಞಾನ ವರ್ಧಿಸಿಕೊಳ್ಳಿರಿ ಎಂಬ ಸಲಹೆ ನೀಡಿದರು. ಶ್ರೀ ಸತ್ಯಸಾಯಿ ಸಂಸ್ಥೆಯ ರಾಜ್ಯಾಧ್ಯಕ್ಷರಾದ ರಾಮದಾಸ ಜೆ ಆಚಾರಿ ಮಾತನಾಡಿ ಮಕ್ಕಳಲ್ಲಿ ಹುದುಗಿರುವ ಸೂಕ್ತ ಪ್ರತಿಭೆಯ ಅನಾವರಣಕ್ಕೆ ಮೂಲ ಆಧಾರವಾದ ಬೇಸಿಗೆ ಶಿಬಿರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ ಎಂದು ಸಲಹೆ ನೀಡಿದರು.
ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಎಸ್.ಜೆ.ಕೈರನ್ ಬೇಸಿಗೆ ರಜಾ ಶಿಬಿರದ ಮಹತ್ವವನ್ನು ತಿಳಿಸಿದರು.
ಸಂಸ್ಥೆಯ ಸದಸ್ಯರು ಮತ್ತು ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಂಡಿದ್ದರು. ಮುಖ್ಯಧ್ಯಾಪಕಿ ಶೈಲಾ ಹೆಗಡೆ ಸ್ವಾಗತಿಸಿ, ಶಿಕ್ಷಕಿ ಯಶವಂತಿ ವಂದಿಸಿದರು.
More Stories
ಜಿಲ್ಲಾ ಮಟ್ಟದ ರಾಮಕ್ಷತ್ರೀಯ ಸಮಾಜದ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾವಳಿ
ಕನ್ನಡ ಕಾರ್ತಿಕ 2024ರ ಅನುದಿನ ಅನುಸ್ಪಂದನ
ಹಿಂದುಳಿದ ನಾಯಕ ಬಿಕೆ ಹರಿಪ್ರಸಾದ್ ಅವರ ಬಗ್ಗೆ ನಾಲಗೆ ಹರಿಬಿಟ್ಟ ಹರೀಶ್ ಪೂಂಜಾ ಸಾರ್ವಜನಿಕ ಜೀವನದಲ್ಲಿರಲು ಯೋಗ್ಯರಲ್ಲ :ಮಂಜುನಾಥ ನಾಯ್ಕ