May 17, 2024

Bhavana Tv

Its Your Channel

ಖಾಸಗಿ ಬಸ್ ಪಲ್ಟಿಯಾಗಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯ, ೨ ಸಾವು

ಹೊನ್ನಾವರ ; ಚಿಕ್ಕಬಳ್ಳಾಪುರ ಗೌರಿಬಿದನೂರಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಹೊನ್ನಾವರ ತಾಲೂಕಿನ ಗೇರುಸೊಪ್ಪ ಸೂಳೆಮುರ್ಕಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸ್ಥಳಕ್ಕೆ ಆಗಮಿಸಿದ ಹೊನ್ನಾವರ ಪೊಲೀಸರಿಂದ ಕ್ಷಿಪ್ರಗತಿಯಲ್ಲಿ ಕಾರ್ಯಾಚರಣೆ ನಡೆಸಿದ್ದು, ತಕ್ಷಣವೇ ಅಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಹೊನ್ನಾವರ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ತೀರಾ ಗಂಭೀರ ಗಾಯಾಳುಗಳನ್ನು ಮಣಿಪಾಲ ಹಾಗೂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ೪೯ ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ಈರ್ವರು ಮೃತಪಟ್ಟಿದ್ದು, ಮೃತರು ಚಿಕ್ಕಬಳ್ಳಾಪುರ ಗೌರಿಬಿದನೂರಿನ ನಿವಾಸಿಗಳಾದ ರುದ್ರೇಶ್(೩೮),ಲೊಕೇಶ್ (೨೬)ಎಂದು ತಿಳಿದು ಬಂದಿದೆ. ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

error: