May 20, 2024

Bhavana Tv

Its Your Channel

ಸತತ ಮೂರನೇ ವರ್ಷವೂ ಶೇಕಡಾ 100 ಫಲಿತಾಂಶ ಸಾಧಿಸಿದ ಡಾ.ಬಿ.ಆರ್.ಅಂಬೇಡ್ಕರ ವಸತಿ ಶಾಲೆ ;

ಹೊನ್ನಾವರ : ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ಬಡ ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣಕ್ಕಾಗಿ ಸ್ಥಾಪಿತವಾದ ಅಳ್ಳಂಕಿಯ ಡಾ.ಬಿ. ಅರ್. ಅಂಬೇಡ್ಕರ ವಸತಿ ಶಾಲೆಯು 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ. ಯಲ್ಲಿ ಶೇಕಡಾ 100 ಫಲಿತಾಂಶ ಸಾಧಿಸಿದೆ.

ಪರೀಕ್ಷೆಗೆ ಹಾಜರಾದ 37 ವಿದ್ಯಾರ್ಥಿಗಳಲ್ಲಿ 37 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಅತ್ಯುನ್ನತ ದರ್ಜೆಯಲ್ಲಿ 11, ಪ್ರಥಮ ದರ್ಜೆಯಲ್ಲಿ 25, ಹಾಗೂ ದ್ವಿತೀಯ ದರ್ಜೆಯಲ್ಲಿ 01 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶಾಲೆಯ ಗುಣಾತ್ಮಕ ಫಲಿತಾಂಶ ಶೇಕಡಾ 90.49 ಆಗಿರುತ್ತದೆ.

ಗುಣಮಟ್ಟದ ಫಲಿತಾಂಶ ಸಾಧಿಸಿದ ವಿದ್ಯಾರ್ಥಿಗಳಿಗೆ, ಅವಿರತ ಶ್ರಮಿಸಿದ ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿಗಳಿಗೆ, ಬೆಂಬಲ ನೀಡಿದ ಪಾಲಕ ವರ್ಗದವರಿಗೆ ಪ್ರಾಂಶುಪಾಲರಾದ ಶ್ರೀನಿವಾಸ ನಾಯ್ಕ ಮತ್ತು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಅಜ್ಜಪ್ಪ ಸೊಗಲದ ಅಭಿನಂದನೆ ಸಲ್ಲಿಸಿದ್ದಾರೆ.

error: