May 20, 2024

Bhavana Tv

Its Your Channel

ಇಡಗುಂಜಿ ಪ್ರೌಢಶಾಲೆ ಶೇ 100 ಫಲಿತಾಂಶ

ಹೊನ್ನಾವರ : ಉತ್ತರಕನ್ನಡ ಜಿಲ್ಲೆ ಹೊನ್ನಾವರ ತಾಲ್ಲೂಕಿನ ಇಡಗುಂಜಿ ಪ್ರೌಢಶಾಲಾ ವಿದ್ಯಾರ್ಥಿಗಳು 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 100% ಫಲಿತಾಂಶದೊAದಿಗೆ ಐತಿಹಾಸಿಕ ಸಾಧನೆ ಮಾಡಿದ್ದಾರೆ
ಕು.ಶ್ರೀನಿಧಿ ಗಣಪತಿ ಭಟ್ಟ 95.2% ಅಂಕ ಪಡೆಯುವದರೊಂದಿಗೆ ಪ್ರಥಮ ಸ್ಥಾನ ಪಡೆದರೆ, ಕು. ಸುಮುಖ ಕೃಷ್ಣ ನಾಯ್ಕ 94.4% ಅಂಕ ಪಡೆದು ದ್ವಿತೀಯ ಸ್ಥಾನ ಪಡೆದರೆ, ಕು. ಶಿಲ್ಪಾ ಮಹಾಭಲೇಶ್ವರ ನಾಯ್ಕ 91.5% ಅಂಕ ಪಡೆಯುವದರೊಂದಿಗೆ ತೃತೀಯ ಸ್ಥಾನ ಪಡೆದಿರುತ್ತಾಳೆ.

ವಿದ್ಯಾರ್ಥಿಗಳ ಹಾಗೂ ಶಾಲೆಯ ಈ ಐತಿಹಾಸಿಕ ಸಾಧನೆಗೆ ಕಾರಣಿಕರ್ತರಾದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಶಾಲೆಯ ಉಪಪ್ರಾಚಾರ್ಯರಾದ ಶ್ರೀಮತಿ ಆಶಾ ವಿ ಪೈ ಹಾಗೂ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀ ರಮೇಶ ಶ್ಯಾನಭಾಗ ಮತ್ತು ಸದಸ್ಯರು ಹಿರಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಅಭಿನಂದಿಸಿರುತ್ತಾರೆ.

error: