July 11, 2024

Bhavana Tv

Its Your Channel

ಹೊನ್ನಾವರ ಬ್ಲಾಕ್ ಕಾಂಗ್ರೇಸ್ ತಾಲೂಕ ಅಧ್ಯಕ್ಷರಾಗಿ ಉದ್ಯಮಿ ಮಹೇಶ ನಾಯ್ಕ ಹಳದೀಪುರ ನೇಮಕ

ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ ಆದೇಶ

ಹೊನ್ನಾವರ : ಹಳದೀಪುರ ಗ್ರಾಮೀಣ ಭಾಗದವರಾದ ಇವರು ಕಾಲೇಜು ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೇಸ್ ಪಕ್ಷದ ಮೂಲಕ ಸಂಘಟನೆಗೆ ಒತ್ತು ನೀಡುತ್ತಾ ಬಂದಿದ್ದರು. ಹಳದೀಪುರ ಘಟಕದ ಕಾರ್ಯದರ್ಶಿಯಾಗಿ ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದರು. ಇವರ ಸೇವೆ ಪರಿಗಣಿಸಿ ಪಕ್ಷ ಬ್ಲಾಕ್ ಅಧ್ಯಕ್ಷ ಸ್ಥಾನ ನೀಡಿದೆ. ಈ ಹಿಂದೆ ಹೊನ್ನಾವರ ಬ್ಲಾಕ್ ಅಧ್ಯಕ್ಷರಾಗಿದ್ದ ಜಗದೀಪ ತೆಂಗೇರಿ ರಾಜೀನಾಮೆ ಹಿನ್ನಲೆ ಅಧ್ಯಕ್ಷ ಸ್ಥಾನಕ್ಕೆ ಇವರನ್ನು ನಿಯೋಜನೆ ಮಾಡಲಾಗಿದೆ. ಇವರ ಪತ್ನಿ ಪುಷ್ಪಾ ನಾಯ್ಕ ಹಳದೀಪುರ ಗ್ರಾ.ಪಂ. ಅಧ್ಯಕ್ಷರಾಗಿ, ತಾಲೂಕ ಕಾಂಗ್ರೇಸ್ ಮಹಿಳಾ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

   ಈ ಬಗ್ಗೆ ಪತ್ರಿಕೆಯೊಂದಿಗೆ ಮಹೇಶ ನಾಯ್ಕ ಮಾತನಾಡಿ ಪಕ್ಷ ಗುರುತರವಾದ ಜವಬ್ದಾರಿ ನೀಡಿದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆ ಮಾಡುತ್ತೇನೆ. ಮುಂದಿನ ಜಿಲ್ಲಾ ಪಂಚಾಯತ ತಾಲೂಕ ಪಂಚಾಯತ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಿಸಲು ಶಕ್ತಿಮೀರಿ ಪ್ರಯತ್ನಿಸುತ್ತೇನೆ ಎಂದಿದ್ದಾರೆ. 

ನಾನು ಬ್ಲಾಕ್ ಅಧ್ಯಕ್ಷರಾದ ಹಿನ್ನಲೆ ಪತ್ನಿ ತಾಲೂಕ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಬೇರೆಯವರಿಗೆ ಅವಕಾಶ ನೀಡುದಾಗಿ ಇರ್ವರು ಒಮ್ಮತದಿಂದ ಇದೇ ವೇಳೆ ತಿಳಿಸಿದ್ದಾರೆ.
ಭಾವನಾ ಟಿವಿಗಾಗಿ ವಿಶ್ವನಾಥ ಸಾಲ್ಕೋಡ್ ಹೊನ್ನಾವರ

error: