April 27, 2024

Bhavana Tv

Its Your Channel

ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಳಿಕಟ್ಟಿ

ಕಾರವಾರ: ತಮ್ಮ ಉತ್ತಮ, ಜನಪರ ಕಾರ್ಯದ ಮೂಲಕ ಉತ್ತರ ಕನ್ನಡ ಜನರ ಮೆಚ್ಚುಗೆ ಗಳಿಸಿದ್ದ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಳಿಕಟ್ಟಿ ನಿಯೋಜನೆಯಾಗಿದ್ದಾರೆ. ಸರ್ಕಾರ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಇದರಲ್ಲಿ ಉತ್ತರಕನ್ನಡ ಜಿಲ್ಲಾಧಿಕಾರಿಗಳು ಸೇರಿದ್ದಾರೆ.
ನೂತನ ಜಿಲ್ಲಾಧಿಕಾರಿಯಾಗಿ ಜಿಲ್ಲೆಗೆ ಆಗಮಿಸಿದ ಪ್ರಭುಲಿಂಗ ಕವಳಿಕಟ್ಟಿ ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸಿ, ಉತ್ತಮ ಹೆಸರು ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದ್ದು, ಅವರನ್ನು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಕಮಿಷನರ್ ಆಗಿ ನೇಮಕ ಮಾಡಲಾಗಿದೆ.

ವರದಿ: ನರಸಿಂಹ ನಾಯ್ಕ್ ಹರಡಸೆ

error: