May 17, 2024

Bhavana Tv

Its Your Channel

ಕರ್ನಾಟಕ ರಕ್ಷಣಾ ವೇದಿಕೆಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಕುಮಟಾ ; ಕೋವಿಡ್ ೧೯ ಸಂದರ್ಭದಲ್ಲಿ ಜಿಲ್ಲೆಯ ಕೆಲವು ತಾಲೂಕ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಹಾಸಿಗೆಯ ಸಮಸ್ಯೆಯನ್ನು ಬಗೆಹರಿಸುವ ಸಲುವಾಗಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು

ನಂತರ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಭಾಸ್ಕರ್ ಪಟಗಾರ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಿAದ ಕೋವಿಡ್೧೯ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಉತ್ತಮ ಕ್ರಮವನ್ನು ಕೈಗೊಂಡಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ಉತ್ತರ ಕನ್ನಡ ಜಿಲ್ಲಾಡಳಿತವನ್ನು ಅಭಿನಂದಿಸುತ್ತದೆ. ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಜಿಲ್ಲೆಯ ಕೆಲವೊಂದು ಸರಕಾರಿ ತಾಲೂಕ ಆಸ್ಪತ್ರೆಯಲ್ಲಿ. ಕೋವಿಡ್ ಇತರ ಬಡ ಹೊರ ರೋಗಿಗಳನ್ನು ಕೆಲವು ತಾಲೂಕ ಆಸ್ಪತ್ರೆಯಲ್ಲಿ ಹಾಸಿಗೆಯ ವ್ಯವಸ್ಥೆಯಿಲ್ಲದೆ ರೋಗಿಗಳನ್ನು ಸೇರಿಸಿಕೊಳ್ಳದೇ ದೂರದ ಕಾರವಾರ ಜಿಲ್ಲಾಸ್ಪತ್ರೆಗೆ ಹೋಗುವಂತೆ ತಿಳಿಸಿ ತಾಲೂಕು ಆಸ್ಪತ್ರೆಯಲ್ಲಿ ಯಾವುದೇ ರೀತಿಯ ಕೋವಿಡ್ ರೋಗಿಗಳನ್ನು ಸೇರಿಸಿಕೊಳ್ಳದೇ ಇರುವುದು ನಮ್ಮ ಗಮನಕ್ಕೆ ಬಂದಿರುತ್ತದೆ.
ದಯವಿಟ್ಟು ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಯಲ್ಲಿ ಕೋವಿಡ್ ಇತರ ರೋಗಿಗಳಿಗೆ ದಯವಿಟ್ಟು ಹಾಸಿಗೆಯ ವ್ಯವಸ್ಥೆಯನ್ನು ಮಾಡಿಕೊಡುವಂತೆ. ಇದರಿಂದ ದೂರದ ತಾಲೂಕಿನಿಂದ ಕಾರವಾರದ ಜಿಲ್ಲಾಸ್ಪತ್ರೆಗೆ ಬಂದು ಕಷ್ಟಕರ ಆಗುವುದನ್ನು ತಡೆಯುವ ನಿಟ್ಟಿನಲ್ಲಿ ತಾವುಗಳು ಕ್ರಮ ಕೈಗೊಳ್ಳಬೇಕಾಗಿ ವಿನಂತಿಸಿಕೊಳ್ಳುತ್ತೇವೆ. ಅದೇ ರೀತಿ ಜಿಲ್ಲಾಸ್ಪತ್ರೆಯಲ್ಲಿ ಸಹ ಹೊರ ತಾಲೂಕಿನಿಂದ ಬಂದ ರೋಗಿಗಳಿಗೆ ಸರಿಯಾದ ಸ್ಪಂದನೆ ಸಿಗದಿರುವುದು ನಮ್ಮ ಗಮನಕ್ಕೆ ಬಂದಿದೆ. ದಯವಿಟ್ಟು ಜಿಲ್ಲಾಸ್ಪತ್ರೆಯಲ್ಲಿ ಹೊರ ತಾಲೂಕಿನ ರೋಗಿಗಳಿಗೆ ಮುಂದಿನ ದಿನದಲ್ಲಿ ಯಾವುದೇ ರೀತಿಯ ತೊಂದರೆಯಾಗದAತೆ ಸಾರ್ವಜನಿಕರಿಗೆ ಬಡವರಿಗೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿಕೊಡಬೇಕು ಎಂದರು

ಈ ಸಂದರ್ಭದಲ್ಲಿ ಕಾರವಾರ ನಗರ ಘಟಕ ಅಧ್ಯಕ್ಷ ಅಂತೋನಿ ಫರ್ನಾಂಡಿಸ್. ಹೊನ್ನಾವರ ತಾಲೂಕ ಅಧ್ಯಕ್ಷ ಮಂಜುನಾಥ ಗೌಡ. ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

error: