December 22, 2024

Bhavana Tv

Its Your Channel

ಕುಮಟಾ ಪಟ್ಟಣದ ತಾ.ಪಂ ಸಭಾಭವನದಲ್ಲಿ ತಾ.ಪಂ ಆಡಳಿತಾಧಿಕಾರಿ ಈಶ್ವರ ನಾಯ್ಕ ಅಧ್ಯಕ್ಷತೆಯಲ್ಲಿ ಕೆ.ಡಿ.ಪಿ ಸಭೆ ನಡೆಯಿತು.

ಕುಮಟಾ: ಕೊವಿಡ್ ಹಿನ್ನೆಲೆಯಲ್ಲಿ ೩ ತಿಂಗಳ ನಂತರ ಕೆ.ಡಿ.ಪಿ ಸಭೆಯನ್ನು ಆಯೋಜಿಸಲಾಗಿದೆ. ತಾಲೂಕಾ ಮಟ್ಟದ ೨೭ ಇಲಾಖೆಯಲ್ಲಿ ೧೬ ಇಲಾಖೆಯ ಅಧಿಕಾರಿಗಳು ಮಾತ್ರ ಕೆ.ಡಿ.ಪಿ ಸಭೆಯಲ್ಲಿ ಭಾಗವಹಿಸಿದ್ದಾರೆ. ಇನ್ನುಳಿದ ಅಧಿಕಾರಿಗಳು ಗೈರಾಗಿದ್ದಾರೆ. ಇಲಾಖೆಯು ಕೈಗೊಂಡ ಕಾರ್ಯಕ್ರಮ ಮತ್ತು ಮುಂದೆ ನಡೆಯಬೇಕಾದ ಕೆಲಸಗಳ ಕುರಿತು ವಿಸ್ತçತ ಚರ್ಚೆ ನಡೆಸಲು ಕೆ.ಡಿ.ಪಿ ಸಭೆ ಅನುಕೂಲವಾಗುತ್ತದೆ. ಅಲ್ಲದೇ ಸಾರ್ವಜನಿಕರಿಗೆ ಮಾಹಿತಿ ನೀಡಲು ಉತ್ತಮವಾಗುತ್ತದೆ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ತಾಲೂಕಾ ಆರೋಗ್ಯಾಧಿಕಾರಿ ಡಾ.ಆಜ್ಞಾ ನಾಯಕ ಮಾತನಾಡಿ, ಕುಮಟಾದಲ್ಲಿ ಕೊವಿಡ್ ನಿಯಂತ್ರಣಕ್ಕೆ ಬಂದರೂ ರೋಗ ಲಕ್ಷಣವುಳ್ಳವರ ಸಂಖ್ಯೆ ಇಳಿಮುಖವಾಗಿಲ್ಲ. ಒಟ್ಟೂ ೪ ಸಾವಿರ ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಪ್ರತಿನಿತ್ಯ ೨೦೦ ಲಸಿಕೆ ಪೂರೈಕೆಯಾಗುತ್ತಿದ್ದು, ೪೫ ವರ್ಷಕ್ಕಿಂತ ಮೇಲ್ಪಟ್ಟವರಿಗೆ ೨ ನೆಯ ಡೋಸ್ ಮಾತ್ರ ನೀಡಲಾಗುತ್ತಿದೆ. ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಂದ್ರ ಭಟ್ಟ ಮಾತನಾಡಿ, ತಾಲೂಕಿನ ಪ್ರಾಥಮಿಕ ಶಾಲೆಯಲ್ಲಿ ೭೭೯ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದು, ೯೯ ಹುದೆಗಳು ಖಾಲಿಯಿದ್ದು, ೯ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ೨ ಉರ್ದು ಶಾಲೆಯಲ್ಲಿ ಹೆಚ್ಚುವರಿಯಾಗಿ ೧ ನೆಯ ತರಗತಿ ಆಂಗ್ಲ ಮಾಧ್ಯಮವನ್ನು ಆರಂಭಿಸಲಾಗಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆಯ ದಿನಾಂಕವನ್ನು ಸರ್ಕಾರ ನಿಗಪಡಿಸಿದ್ದು, ಪರೀಕ್ಷಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರಿಗೆ ಮತ್ತು ಸಿಬ್ಬಂದಿ ವರ್ಗದವರಿಗೆ ಲಸಿಕೆ ನೀಡಲಾಗಿದೆ. ಪರೀಕ್ಷೆಗೆ ಸಿದ್ಧತೆ ಕೈಗೊಳ್ಳಲು ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ತಾಲೂಕಾ ಮಟ್ಟದಲ್ಲಿಯೂ ಸಭೆ ನಡೆಸಿ, ಅಗತ್ಯ ಕ್ರಮ ವಹಿಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಸಿ.ಟಿ.ನಾಯ್ಕ ಉಪಸ್ಥಿತರಿದ್ದರು.

error: