ಕಳೆದ ನಾಲ್ಕೆöÊದು ದಿನಗಳು ಸುರಿದ ನಿರಂತರ ಮಳೆಯಿಂದಾಗಿ ಅಘನಾಶಿನಿ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದ್ದು ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಉಂಟಾಗಿದೆ
ಕುಮಟಾ: ಹೆಗಡೆ, ಮಿರ್ಜಾನ್,ಕೊಡ್ಕಣಿ, ದಿವಗಿ, ಹಾಗೂ ಹಲವು ಗ್ರಾಮಕ್ಕೆ ಪ್ರವಾಹ ಭೀತಿ ಸುರುವಾಗಿದೆ ತಾಲೂಕಿನ ಸೇರಿದಂತೆ ಕರಾವಳಿ ಭಾಗದಲ್ಲಿ ಗಾಳಿ ಸಹಿತ ವ್ಯಾಪಕ ಮಳೆಯಾಗುತ್ತಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಜಿಲ್ಲೆಯಲ್ಲಿ ವರ್ಷಧಾರೆ ಆರಂಭವಾಗಿದ್ದು, ಇಂದು ಕೂಡ ಮುಂದುವರೆದಿದೆ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳಲ್ಲಿ ನೀರು ತುಂಬಿಕೊAಡಿರುವ ಕಾರಣ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ.ಇನ್ನು ಅರಬ್ಬೀ ಸಮುದ್ರದಲ್ಲಿ ಕಡಲಬ್ಬರ ಜೋರಾಗಿದ್ದು ಭಾರಿ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಜಿಲ್ಲಾಡಳಿತ ಕಡಲತೀರಗಳಿಗೆ ಯಾರು ತೆರಳದಂತೆ ಸೂಚಿಸಿದೆ.
ಹಳ್ಳಗಳ ಅಕ್ಕಪಕ್ಕದ ಹೊಲಗಳಿಗೆ ನೀರು ನುಗ್ಗಿದ್ದು, ಬೆಳೆ ಹಾನಿಯಾಗುವ ಆತಂಕ ರೈತರನ್ನು ಕಾಡುತ್ತಿದೆ.
More Stories
ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿ ಶಾಲೆಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ: ಶೇ. 94.23
ಮೋದಿ ಒಬ್ಬ ಒಳ್ಳೆ ನಾಟಕಕಾರ, ಇವೆಂಟ್ ಮ್ಯಾನೇಜರ್: ಸಿದ್ದರಾಮಯ್ಯ
ಜೆಡಿಎಸ್ ತೊರೆದು ‘ಕೈ’ ಹಿಡಿದ ಶಾಬಂದ್ರಿ