ಕುಮಟಾ: ನೆರೆ ಪೀಡಿತ ಪ್ರದೇಶಗಳಿಂದ ಸ್ಥಳಾಂತರಗೊAಡ ಸಂತ್ರಸ್ತ ಕುಟುಂಬಗಳನ್ನು ಭೇಟಿಯಾದ ಶಾಸಕ ದಿನಕರ ಶೆಟ್ಟಿ, ಹಣ್ಣುಗಳನ್ನು ವಿತರಿಸಿ ಸಾಂತ್ವನ ಹೇಳಿದರು.
ತಾಲ್ಲೂಕಿನ ಖೈರೆ, ಮಿರ್ಜಾನ ತಾರಿಬಾಗಿಲು, ಕೊಡ್ಕಣಿ ಪ್ರಾಥಮಿಕ ಶಾಲೆಯಲ್ಲಿ ತೆರೆಯಲಾದ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಯ ಕುರಿತು ಪರಿಶೀಲಿಸಿ, ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ಮಾಡಿದರು.
ನಂತರ ಮಾತನಾಡಿದ ಅವರು, ಕಾಳಜಿ ಕೇಂದ್ರದಲ್ಲಿರುವ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ನಡೆಸಬೇಕು. ಅಲ್ಲದೇ, ಊಟೋಪಚಾರದಲ್ಲಿ ಲೋಪದೋಷ ಬಾರದ ರೀತಿಯಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದ ಅವರು, ಹಾನಿಯ ಪ್ರಮಾಣವನ್ನು ಶೀಘ್ರದಲ್ಲಿ ಪರಿಶೀಲಿಸಿ, ಪರಿಹಾರ ಧನ ಅವರಿಗೆ ಸಿಗುವಂತಾಗಲು ಮುತುವರ್ಜಿಯಿಂದ ಕೆಲಸ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡಲು ಕಂಜೂಸು ತನ ಮಾಡಬಾರದು ಎಂದು ಈಗಾಗಲೇ ಮೇಲಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅದರಂತೆ ಅಧಿಕಾರಿಗಳು ಕಾರ್ಯನಿರ್ವಹಿಸಲು ಕ್ರಮ ವಹಿಸಬೇಕು ಎಂದು ಸಹಾಯಕ ಆಯುಕ್ತ ರಾಹುಲ ಪಾಂಡೆ ಅವರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಸಿ.ಟಿ.ನಾಯ್ಕ, ನೋಡಲ್ ಅಧಿಕಾರಿ ವಿಶ್ವನಾಥ ಭಟ್ಟ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಅಮೃತಾ ಶಾನಭಾಗ, ಗ್ರಾ.ಪಂ ಅಧ್ಯಕ್ಷ ಪರಮೇಶ್ವರ ಪಟಗಾರ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಸದಸ್ಯರಾದ ಆದಿತ್ಯ ಶೇಟ್, ಪವನ ಶೇಟ್, ಪ್ರಮುಖರಾದ ಗಣೇಶ ಅಂಬಿಗ ಸೇರಿದಂತರ ಮತ್ತಿತರರು ಇದ್ದರು.
ವರದಿ; ನಟರಾಜ ಗದ್ದೆಮನೆ
More Stories
ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿ ಶಾಲೆಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ: ಶೇ. 94.23
ಮೋದಿ ಒಬ್ಬ ಒಳ್ಳೆ ನಾಟಕಕಾರ, ಇವೆಂಟ್ ಮ್ಯಾನೇಜರ್: ಸಿದ್ದರಾಮಯ್ಯ
ಜೆಡಿಎಸ್ ತೊರೆದು ‘ಕೈ’ ಹಿಡಿದ ಶಾಬಂದ್ರಿ