December 22, 2024

Bhavana Tv

Its Your Channel

ಶಾಸಕ ದಿನಕರ ಶೆಟ್ಟಿಯವರ ಅಭಿವೃದ್ಧಿ ಕಾರ್ಯಗಳನ್ನು ಸಹಿಸಿಕೊಳ್ಳಲಾದ ಜೆಡಿಎಸ್ ಮತ್ತು ಕಾಂಗ್ರೇಸ್

ಕುಮಟಾ: ಶಾಸಕ ದಿನಕರ ಶೆಟ್ಟಿಯವರ ಅಭಿವೃದ್ಧಿ ಕಾರ್ಯಗಳನ್ನು ಸಹಿಸಿಕೊಳ್ಳಲಾದ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಕೆಲ ಪುಡಾರಿಗಳು ಕಾರ್ಮಿಕರ ಕಿಟ್ ವಿತರಣೆಯಲ್ಲಿ ಮೂಗು ತೂರಿಸುತ್ತಿದ್ದಾರೆ. ಅವರಿಗೆ ಮುಂದಿನ ದಿನಗಳಲ್ಲಿ ಜನಸಾಮಾನ್ಯರೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ಬಿಜೆಪಿ ಮಂಡಳಾಧ್ಯಕ್ಷ ಹೇಮಂತಕುಮಾರ ಗಾಂವಕರ ಹೇಳಿದರು.
ಅವರು ಭಾನುವಾರ ಕುಮಟಾ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕಾರ್ಮಿಕ ಇಲಾಖೆಯ ಕಿಟ್ ನೀಡಿರುವ ಲೆಕ್ಕ ನಮ್ಮ ಬಳಿಯಿದೆ. ನಿಜವಾದ ಬಡವರಿಗೆ, ಸರಿಯಾದ ಬಡವರಿಗೆ ತಲುಪಲಿ ಎಂದು ನಮ್ಮ ಕಾರ್ಯಕರ್ತರು ಹಗಲಿರುಳು ಶ್ರಮಿಸುತ್ತಿದ್ದಾರೆ. ಕಿಟ್ ವಿತರಣೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿದ್ದಾರೆ. ನಾವೆನೂ ಮಾರಾಟ ಮಾಡಿಲ್ಲ ಎಂಬುದನ್ನು ಅವರು ಅರ್ಥಮಾಡಿಕೊಳ್ಳಲಿ. ತಾಲೂಕಿಗೆ ಒಟ್ಟೂ ೮ ಸಾವಿರ ಕಿಟ್ ಬಂದಿದ್ದು, ೪೫೦೦ ಕಿಟ್‌ಗಳನ್ನು ಗ್ರಾ.ಪಂ ವ್ಯಾಪ್ತಿಗೆ, ೩,೫೦೦ ಪಟ್ಟಣ ವ್ಯಾಪ್ತಿಗೆ ನೀಡಲು ಮುಂದಾಗಿದ್ದೇವೆ.
ಬಡವರಿಗೆ, ಅಂಗವಿಕಲರಿಗೆ, ಬಡ ಕುಟುಂಬಗಳ ವಿಧವೆಯರಿಗೆ ಕಾರ್ಮಿಕರ ಕಿಟ್ ತಲುಪಿಸಲು ನಮ್ಮ ಪಕ್ಷದ ಕಾರ್ಯಕರ್ತರು ನಿಯತ್ತಿನಿಂದ ಕೆಲಸ ನಿರ್ವಹಿಸುತ್ತಿದ್ದು, ಕಳೆದ ಬಾರಿಯ ಕೋವಿಡ್ ಸಂದರ್ಭದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಹಲವಾರು ರೀತಿಯಲ್ಲಿ ಸಹಾಯ ಮಾಡಿದ್ದಾರೆ. ಆ ಸಂದರ್ಭದಲ್ಲಿ ವಿರೋಧಿಗಳು ನಿದ್ದೆಯಲ್ಲಿ ಮಗ್ನರಾಗಿದ್ದರು ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಿಂದಲೂ ಕಿಟ್ ಬಂದಿತ್ತು. ಅದೆಲ್ಲ ಯಾರ ಪಾಲಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ನಿಜವಾದ ಬಡವರಿಗೆ ತಲುಪಿಸುವ ಕಾರ್ಯಕ್ಕೆ ಅವರು ಮುಂದಾಗಿಲ್ಲ ಎಂದು ಜೆ.ಡಿ.ಎಸ್ ಮುಖಂಡ ಸೂರಜ ನಾಯ್ಕ ಸೋನಿ ಹಾಗೂ ಮಾಜಿ ಶಾಸಕಿ ಶಾರದಾ ಶೆಟ್ಟಿ ವಿರುದ್ಧ ಆರೋಪಿಸಿದರು.
ಬಿಜೆಪಿ ಮುಖಂಡ ಡಾ.ಜಿ.ಜಿ.ಹೆಗಡೆ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ನಮ್ಮ ಕಾರ್ಯಕರ್ತರು ಹಗಲಿರುಳು ಶ್ರಮಿಸಿದ್ದಾರೆ. ರೋಗಿಗಳಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಿದ್ದಾರೆ. ವಿರೋಧ ಪಕ್ಷದವರು ವಿರೋಧ ಮಾಡುವುದಕ್ಕೆ ಇರುವುದಲ್ಲ. ತಪ್ಪಿದ್ದನ್ನು ಹೇಳಲಿ. ಅದನ್ನು ಬಿಟ್ಟು ಎಲ್ಲದಕ್ಕೂ ವಿರೋಧ ಮಾಡುವುದು ಸರಿಯಲ್ಲ. ಅವರ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ. ಶಾಸಕ ದಿನಕರ ಶೆಟ್ಟಿ ಕೋವಿಡ್ ಸಂದರ್ಭದಲ್ಲಿ ಒಂದು ದಿನವೂ ಮನೆಯಲ್ಲಿ ಕುಳಿತಿಲ್ಲ. ಕ್ಷೇತ್ರದಾದ್ಯಂತ ಪ್ರವಾಸ ಕೈಗೊಂಡು ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕನಸಿನ ಯೋಜನೆಯಾದ ಉಜ್ವಲ ಯೋಜನೆ ಬಡವರಿಗೆ ತಲುಪಿಸಲು ನಮ್ಮ ಕಾರ್ಯಕರ್ತರು ಬಹಳಷ್ಟು ಉತ್ತಮವಾಗಿ ಕೆಲಸ ನಿರ್ವಹಿಸಿದ್ದಾರೆ ಎಂದರು.
ತೊರ್ಕೆ ಗ್ರಾ.ಪಂ ಅಧ್ಯಕ್ಷ ಆನಂದು ಕವರಿ ಬಿಜೆಪಿ ಮಂಡಳ ಉಪಾಧ್ಯಕ್ಷ ವಿನಾಯಕ ಭಟ್ಟ ಸಂತೇಗುಳಿ ಮಾತನಾಡಿದರು.
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಜಿ.ಐ.ಹೆಗಡೆ, ದೇವಗಿರಿ ಗ್ರಾ.ಪಂ ಉಪಾಧ್ಯಕ್ಷ ಎಸ್.ಟಿ.ನಾಯ್ಕ, ಪುರಸಭಾ ಅಧ್ಯಕ್ಷೆ ಮೋಹಿನಿ ಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯ್ಕ, ದೇವಗಿರಿ ಶಕ್ತಿಕೇಂದ್ರದ ಅಧ್ಯಕ್ಷ ಕುಮಾರ ಭಟ್ಟ, ಅಳಕೋಡ ಗ್ರಾ.ಪಂ ಸದಸ್ಯ ವಿನಾಯಕ ನಾಯ್ಕ, ಪುರಸಭಾ ಸದಸ್ಯೆ ಶೈಲಾ ಗೌಡ, ಪ್ರಮುಖರಾದ ಕುಮಾರ ಮಾರ್ಕಾಂಡೆ ಅಶೋಕ ಪ್ರಭು, ಜಿ.ಎಸ್.ಗುನಗಾ, ವಿಶ್ವನಾಥ ನಾಯ್ಕ, ಗಣಪತಿ ನಾಯ್ಕ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ವರದಿ: ನಟರಾಜ ಗದ್ದೆಮನೆ ಕುಮಟಾ

error: