December 22, 2024

Bhavana Tv

Its Your Channel

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಾಕಷ್ಟು ಕಡೆಗಳಲ್ಲಿ ನೂತನ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ -ಶಾಸಕ ದಿನಕರ ಶೆಟ್ಟಿ

ಕುಮಟಾ: ಅವರು ಮಂಗಳವಾರ ಕುಮಟಾ ತಾಲೂಕಿನ ಕೂಜಳ್ಳಿಯಲ್ಲಿ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ೧೬ ಲಕ್ಷ ರೂ. ವೆಚ್ಚದಲ್ಲಿ ಮಂಜೂರಾದ ಅಂಗನವಾಡಿ ಕೇಂದ್ರದ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ, ಮಾತನಾಡಿದರು.
ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಪ್ರತಿಯೊಂದು ಕಡೆಗಳಲ್ಲಿಯೂ ಉತ್ತಮವಾದ ಶಾಲಾ ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡುತ್ತಿದೆ. ಕುಮಟಾ ತಾಲೂಕಿನ ಪ್ರತಿಯೊಂದು ಕಡೆಗಳಲ್ಲಿಯೂ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಹೊಂದಿರಬೇಕೆAದು ರಾಜ್ಯ ಸರ್ಕಾರದ ಮೇಲೆ ಒತ್ತಡ ತಂದು ಅನುದಾನ ಬಿಡುಗಡೆ ಮಾಡಿಸುತ್ತಿದ್ದೇನೆ ಎಂದರು.

ಹೆಗಡೆ ಗ್ರಾ.ಪಂ ವ್ಯಾಪ್ತಿಯ ತಣ್ಣೀರಕುಳಿಯಲ್ಲಿ ಹೈಟೆಕ್ ಮಾದರಿ ಅಂಗನವಾಡಿ ನಿರ್ಮಾಣ ಮಾಡಲಾಗಿದ್ದು, ಅದರ ಉದ್ಘಾಟನೆಯನ್ನು ನೆರವೇರಿಸಲಾಗಿದೆ. ೨೦೧೦ ರಲ್ಲಿ ಮೊದಲ ಬಾರಿ ಶಾಸಕನಾಗಿ ಆಯ್ಕೆಯಾದ ನಂತರ ಕುಮಟಾ ಪಟ್ಟಣದಲ್ಲಿ ಪದವಿ ಕಾಲೇಜಿಗೆ ಜಾಗ ಮಂಜೂರಿ ಮಾಡಿಸಿದ್ದೆ. ಈಗ ಹಣ ಮಂಜೂರಿ ಮಾಡಿಸಿ, ತ್ವರಿತಗತಿಯಲ್ಲಿ ಕಟ್ಟಡ ನಿರ್ಮಾಣದ ಕಾಮಗಾರಿ ನಡೆಯುತ್ತಿದೆ ಎಂದ ಅವರು, ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿಯೂ ಮೂಲಭೂತ ಅಭಿವೃದ್ಧಿಗೆ ಸಾಕಷ್ಟು ಅನುದಾನ ಒದಗಿಸಿದ್ದು, ಪ್ರತಿಯೊಂದು ಕಡೆಗಳಲ್ಲಿಯೂ ಉತ್ತಮವಾದ ರಸ್ತೆಯನ್ನು ನಿರ್ಮಾಣ ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಕೂಜಳ್ಳಿ ಗ್ರಾ.ಪಂ ಅಧ್ಯಕ್ಷ ಗಜಾನನ ನಾಯ್ಕ, ಉಪಾಧ್ಯಕ್ಷೆ ಗೌರಿ ಗೌಡ ಸದಸ್ಯರಾದ ನಾಗರಾಜ ನಾಯ್ಕ ಸೇರಿದಂತೆ ಮತ್ತಿತರರು ಇದ್ದರು

error: