December 22, 2024

Bhavana Tv

Its Your Channel

ಕುಮಟಾ ಪ್ರವಾಸಿ ಮಂದಿರದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾದ ವಿಶ್ವೇಶ್ವರ ಹೆಗಡೆ ಕಾಗೇರಿ

ಕುಮಟಾ: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶುಕ್ರವಾರ ಕುಮಟಾ ಪ್ರವಾಸಿ ಮಂದಿರದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾಗಿ, ಕುಶಲೋಪರಿ ವಿಚಾರಿಸಿದರು.

ದೀವಗಿ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕುಮಟಾ ಪಟ್ಟಣದ ಪ್ರವಾಸಿ ಮಂದಿರಕ್ಕೆ ಆಗಮಿಸಿದ ಕಾಗೇರಿ, ಕುಮಟಾ ತಾಲೂಕಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಶಾಸಕ ದಿನಕರ ಶೆಟ್ಟಿ ಅವರ ಬಳಿ ಮಾಹಿತಿ ಪಡೆದರು. ಅಲ್ಲದೇ ನೆರೆ ಹಾವಳಿಯಿಂದ ಮನೆ ಹಾನಿ, ಆಸ್ತಿ-ಪಾಸ್ತಿ ನಷ್ಟಗಳ ಕುರಿತು ಮಾಹಿತಿ ಪಡೆದರಲ್ಲದೇ, ಪರಿಹಾರದ ಕ್ರಮಗಳ, .ಇದುವರೆಗೂ ಹಾನಿಯ ಪರಿಹಾರ ಯಾವ ಕಾರಣಕ್ಕೆ ಜಮಾ ಆಗಿಲ್ಲ ಎಂಬ ಕುರಿತು ತಹಸೀಲ್ದಾರ ವಿವೇಕ ಶೇಣ್ವಿ ಬಳಿ ಮಾಹಿತಿ ಪಡೆದರು.
ಹಾನಿಯ ಪ್ರಮಾಣವನ್ನು ಶೀಘ್ರವಾಗಿ ಸಮೀಕ್ಷೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ತಹಸೀಲ್ದಾರ ಅವರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಶಾಸಕ ದಿನಕರ ಶೆಟ್ಟಿ, ಬಿಜೆಪಿ ಮಂಡಳಾಧ್ಯಕ್ಷ ಹೇಮಂತಕುಮಾರ ಗಾಂವಕರ, ಪ್ರಧಾನ ಕಾರ್ಯದರ್ಶಿ ಜಿ.ಐ.ಹೆಗಡೆ, ಪ್ರಮುಖರಾದ ಕುಮಾರ ಕವರಿ, ಗಜಾನನ ಗುನಗಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು

error: