April 19, 2024

Bhavana Tv

Its Your Channel

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ, ಇಬ್ಬರು ಬೈಕ್ ಸವಾರರಿಗೆ ಗಂಭೀರ ಗಾಯ

ಕುಮಟಾ : ರಾಷ್ಟ್ರೀಯ ಹೆದ್ದಾರಿ ೬೬ ಮಿರ್ಜಾನ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಅಂಕೋಲಾ ಕಡೆಯಿಂದ ಕುಮಟಾ ಕಡೆಗೆ ಬರುತ್ತಿದ್ದ ಬೈಕ್ ಸವಾರ ಮತ್ತು ಕುಮಟಾದಿಂದ ಮಿರ್ಜಾನ್ ಕಡೆಗೆ ಹೋಗುತ್ತಿದ್ದ ಇನ್ನೊಂದು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಗಾಯಗೊoಡವರನ್ನು ೧೦೮ ವಾಹನದಲ್ಲಿ ಕುಮಟಾ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಘಾತ ಸ್ಥಳಕ್ಕೆ ಕುಮಟಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವರದಿ ; ನಟರಾಜ ಗದ್ದೆಮನೆ

error: