May 17, 2024

Bhavana Tv

Its Your Channel

ಹನುಮಂತ ಬೆಣ್ಣೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಹೆಚ್ಚುವರಿ ಕೊಠಡಿ ಉದ್ಘಾಟಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ

ಕುಮಟಾ :ಕುಮಟಾ ಪಟ್ಟಣದ ನೆಲ್ಲಿಕೇರಿಯ ಹನುಮಂತ ಬೆಣ್ಣೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಹೆಚ್ಚುವರಿ ಕೊಠಡಿಗಳನ್ನು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ.ನಾಗೇಶ ಉದ್ಘಾಟಿಸಿದ್ದರು.

ಶಿಕ್ಷಣ ಇಲಾಖೆ, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿAಗ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಬಾರ್ಡ್ ಆರ್.ಐ.ಡಿ.ಎಫ್-೨೪ ರ ಅಡಿ ಅನುಮೋದನೆಗೊಂಡ ಹೆಚ್ಚುವರಿ ಕೊಠಡಿಗಳನ್ನು ಉದ್ಘಾಟಣೆ ಮಾಡಿ ನಂತರ ಮಾತನಾಡಿದ ಅವರು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಭಾರತವು ವಿಜ್ಞಾನ ಕ್ಷೇತ್ರದಲ್ಲಿ ಬಹಳ ಉನ್ನತ ಮಟ್ಟದಲ್ಲಿ ಸಾಧನೆ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದ್ದು, ಬಹುತೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ಮತ್ತು ಮಾಡುತ್ತಿರುವವರು ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳು ಎಂದು ಹೆಮ್ಮೆಯಿಂದ ಹೇಳಬೇಕಾಗಿದೆ. ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರು ಹಾಗೂ ಉಪನ್ಯಾಸಕರಿದ್ದು, ಅವರ ಜ್ಞಾನವನ್ನು ವಿದ್ಯಾರ್ಥಿಗಳ ಮೇಲೆ ಧಾರೆ ಎರೆಯುವ ಮೂಲಕ ಭಾರತದ ಸತ್ಪ್ರಜೆಗಳಾಗಿ ರೂಪುಗೊಳ್ಳಲು ಕಾರಣೀಕರ್ತರಾಗಿದ್ದಾರೆ. ವಿದ್ಯಾರ್ಥಿಗಳು ಆಸಕ್ತಿಯಿಂದ ಶಿಕ್ಷಣ ಪಡೆದರೆ ಖಂಡಿತ ಸಾಧನೆ ಮಾಡಲು ಸಾಧ್ಯ ಎಂದರು.
ಪಂಡಿತ್ ದೀನದಯಾಳ ಪಂಡಿತ್ ಅವರ ಕನಸನ್ನು ಈಡೇರಿಸಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಸಮಾಜದ ಅಂತ್ಯದಲ್ಲಿರುವ ವ್ಯಕ್ತಿಗೂ ಸರ್ಕಾರದ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಅಂತ್ಯೋದಯ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದ ಅವರು, ಶಿಕ್ಷಣ, ಆರೋಗ್ಯ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸುವುದು ಬಿಜೆಪಿಯ ಮೂಲತತ್ವವಾಗಿದ್ದು, ಆ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತನ್ನ ಕಾರ್ಯಚಟುವಟಿಕೆಗಳನ್ನು ವಿಸ್ತರಿಸುತ್ತಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ದಿನಕರ ಶೆಟ್ಟಿ ಮಾತನಾಡಿ, ಹನುಮಂತ ಬೆಣ್ಣೆ ಕಾಲೇಜು ನನ್ನ ಕನಸಿನ ಕೂಸು. ಸರ್ಕಾರದ ಹಲವು ಯೋಜನೆಗಳನ್ನು ಕಾಲೇಜಿಗೆ ನೀಡಿ, ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಇದಕ್ಕೆ ಪ್ರಾಚಾರ್ಯರ ಹಾಗೂ ಉಪನ್ಯಾಸಕರು ಉತ್ತಮ ಸಹಕಾರ ನೀಡುತ್ತಿದ್ದಾರೆ. ಈ ಕಾಲೇಜಿನಲ್ಲಿ ಸುಮಾರು ೨ ಸಾವಿರ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದು, ಉತ್ತಮ ಕೊಠಡಿ ನಿರ್ಮಾಣ ಮಾಡಬೇಕೆಂಬ ಅಭಿಲಾಷೆಯಿಂದ ಸರ್ಕಾರದ ಮೇಲೆ ಒತ್ತಡ ತಂದು ೧ ಕೋಟಿ ರೂ. ಅನುದಾನ ಬಿಡುಗಡೆ ಮಾಡಿ, ಹೆಚ್ಚುವರಿ ಕೊಠಡಿ ನಿರ್ಮಿಸಿ, ವಿದ್ಯಾರ್ಥಿಗಳ ಕಲಿಕೆಗೆ ಉತ್ತಮ ವಾತಾವರಣ ಕಲ್ಪಿಸಿರುವುದು ಮನಸ್ಸಿಗೆ ಸಂತೋಷ ನೀಡಿದೆ ಎಂದರು.
ಬಿ.ಸಿ.ನಾಗೇಶ ಸರಳ ಸಜ್ಜನಿಕೆಯ ಸಚಿವರಾಗಿದ್ದು, ಇವರ ಮಾರ್ಗದರ್ಶನದಲ್ಲಿ ನನ್ನ ಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಮತ್ತಷ್ಟು ಹೊಸ ಹೊಸ ಯೋಜನೆಗಳನ್ನು ರೂಪಿಸುವಲ್ಲಿ ಶಕ್ತಿಮೀರಿ ಕೆಲಸ ನಿರ್ವಹಿಸುತ್ತೇನೆ. ಇದಕ್ಕೆ ಕ್ಷೇತ್ರದ ಜನತೆ ಸಹಕಾರ ನೀಡಬೇಕು ಎಂದು ವಿನಂತಿಸಿದರು.
ಕಾಲೇಜಿನ ಪ್ರಾಚಾರ್ಯ ಸತೀಶ ನಾಯ್ಕ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ತಹಸೀಲ್ದಾರ ವಿವೇಕ ಶೇಣ್ವಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಹನುಮಂತಪ್ಪ ನಿಟ್ಟೂರ, ಡಿ.ಡಿ.ಪಿ.ಐ ಹರೀಶ ಗಾಂವಕರ, ಡಯಟ್ ಪ್ರಾಂಶುಪಾಲ ಈಶ್ವರ ನಾಯ್ಕ,ತಾ.ಪಂ ಕಾರ್ಯನಿರ್ವಹಣಾಧಿಕಾರಿ ಸಿ.ಟಿ.ನಾಯ್ಕ, ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗದ ಅಭಿಯಂತರ ಆರ್.ಜಿ.ಗುನಗಿ, ಲೊಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸುದರ್ಶನ ಹೊನ್ನಾವರ, ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಂದ್ರ ಭಟ್ಟ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪ್ರಜ್ಞಾ ಸಂಗಡಿಗರು ಪ್ರಾರ್ಥಿಸಿದರು. ವಿದ್ಯಾರ್ಥಿ ಲಕ್ಷ್ಮೀಶ ಎಂ.ನಾಡಗೀತೆ ಹಾಡಿದರು.

error: