May 17, 2024

Bhavana Tv

Its Your Channel

ಕುಮಟಾ ತಾಲೂಕಿನ ಗ್ರಾಮೀಣ ಭಾಗಗಳಿಗೆ ಸಮರ್ಪಕ ಬಸ್ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಎ.ಬಿ.ವಿ.ಪಿ ಕಾರ್ಯಕರ್ತರಿಂದ ಪ್ರತಿಭಟನಾ ಮೆರವಣಿಗೆ

ಕುಮಟಾ ತಾಲೂಕಿನ ಗ್ರಾಮೀಣ ಭಾಗಗಳಿಗೆ ಸಮರ್ಪಕ ಬಸ್ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಎ.ಬಿ.ವಿ.ಪಿ ಕಾರ್ಯಕರ್ತರು ಪಟ್ಟಣದ ಮಣಕಿ ಮೈದಾನದಿಂದ ತಹಸೀಲ್ದಾರ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು .

ಕುಮಟಾ ಮಣಕಿ ಮೈದಾನದಲ್ಲಿ ಜಮಾಯಿಸಿದ ಎ.ಬಿ.ವಿ.ಪಿ ಕಾರ್ಯಕರ್ತರು ಕುಮಟಾ ತಾಲೂಕಿನ ಗ್ರಾಮೀಣ ಭಾಗಗಳಿಗೆ ಸಮರ್ಪಕ ಬಸ್ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿದರು . ಅಲ್ಲಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ತಹಸೀಲ್ದಾರ್ ಕಚೇರಿಯಲ್ಲಿ ಸಮಾವೇಶಗೊಂಡಿತು . ನಂತರ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು . ಕೊರೊನಾ ಸೋಂಕು ಇಳಿಮುಖವಾಗಿದ್ದರೂ ಸಾರಿಗೆ ಇಲಾಖೆ ಮೊದಲಿನ ರೀತಿಯಲ್ಲಿ ಗ್ರಾಮೀಣ ಭಾಗಗಳಿಗೆ ಬಸ್ ಸೌಲಭ್ಯ ಆರಂಭಿಸಿಲ್ಲ . ಇದರಿಂದ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ . ಬಸ್ ಸೌಲಭ್ಯ ಒದಗಿಸುವಂತೆ ಸಾಕಷ್ಟು ಬಾರಿ ಘಟಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರೂ ಇದುವರೆಗೂ ಕ್ರಮ ಕೈಗೊಂಡಿಲ್ಲ . ಈ ಬಗ್ಗೆ ಪರಿಶೀಲಿಸಿ , ಸೂಕ್ತ ಕ್ರಮ ವಹಿಸಬೇಕೆಂದು ಆಗ್ರಹಿಸಲಾಗಿದೆ . ಒಂದು ವಾರದ ಒಳಗಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಿ , ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು . ಇಲ್ಲವಾದಲ್ಲಿ ಎ.ಬಿ.ವಿ.ಪಿಯಿಂದ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ .
ತಹಸೀಲ್ದಾರ ಅನುಪಸ್ಥಿತಿಯಲ್ಲಿ ಕಂದಾಯ ಅಧಿಕಾರಿ ಪುಷ್ಪಾ ನಾಯ್ಕ ಮನವಿ ಸ್ವೀಕರಿಸಿ , ತಹಸೀಲ್ದಾರ ಗಮನಕ್ಕೆ ತಂದು , ಸಾರಿಗೆ ಇಲಾಖಾ ಅಧಿಕಾರಿಗಳ ಜತೆ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು . ಪ್ರತಿಭಟನೆಯಲ್ಲಿ ಎ.ಬಿ.ವಿ.ಪಿ ವಿಭಾಗ ಸಂಚಾಲಕ ಸಂದೇಶ ನಾಯ್ಕ , ಜಿಲ್ಲಾ ಸಂಚಾಲಕ ಗಜೇಂದ್ರ ಕುಮಟಾ , ಸಹ ಸಂಚಾಲಕ ವಿರೇಂದ್ರ ಗುನಗಾ , ಕಾರ್ಯಕರ್ತರಾದ ಸುಜತ್ , ಪ್ರಸನ್ನ ಭಟ್ಟ , ಭರತ ನಾಯ್ಕ , ಧನ್ಯಾ , ಅನನ್ಯಾ , ಭೂಮಿಕಾ , ಮಾನಸಾ ನಾಯ್ಕ ಸೇರಿದಂತೆ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು .

error: