May 8, 2024

Bhavana Tv

Its Your Channel

ಕನ್ನಡ ರಾಜ್ಯೋತ್ಸವ ಸಮಿತಿಯಿಂದ ಆಯೋಜಿಸಲಾದ ನುಡಿ ಹಬ್ಬ ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ

ವರದಿ: ನಟರಾಜ ಗದ್ದೆಮನೆ ಕುಮಟಾ

ಕುಮಟಾ: ಕನ್ನಡ ರಾಜ್ಯೋತ್ಸವದ ನಿಮಿತ್ತ ಕುಮಟಾದ ಕನ್ನಡ ರಾಜ್ಯೋತ್ಸವ ಸಮಿತಿಯಿಂದ ಪಟ್ಟಣದ ಪುರ ಭವನದಲ್ಲಿ ಆಯೋಜಿಸಲಾದ ನುಡಿ ಹಬ್ಬ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.
ಕನ್ನಡ ರಾಜ್ಯೋತ್ಸವದ ನಿಮಿತ್ತ ಕುಮಟಾ ಪಟ್ಟಣದ ಪುರ ಭವನದಲ್ಲಿ ಕನ್ನಡ ರಾಜ್ಯೋತ್ಸವ ಸಮಿತಿ ಆಯೋಜಿಸಿದ್ದ ನುಡಿ ಹಬ್ಬ ಕಾರ್ಯಕ್ರಮವನ್ನು ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿದರು

. ನಂತರ ಮಾತನಾಡಿದ ಶಾಸಕರು, ನಮ್ಮ ಕರ್ನಾಟಕದಲ್ಲಿ ವಿವಿಧ ಭಾಷೆಗಳ ಸಾಮರಸ್ಯ ವಿದೆ. ಕಾರವಾರದಲ್ಲಿ ಕೊಂಕಣಿ, ಮಂಗಳೂರಿನಲ್ಲಿ ತುಳು, ಬೆಳಗಾವಿ ಮರಾಠಿ ಹೀಗೆ ಒಂದೊAದು ಭಾಗದಲ್ಲಿ ಒಂದೊAದು ಭಾಷೆ ಮಾತನಾಡುವ ಜನರಿದ್ದಾರೆ. ಇದರಿಂದಲೇ ಬಹುಶಃ ಕನ್ನಡ ಭಾಷೆ ಎಲ್ಲೊ ಕಡೆಗಣನೆಗೊಳಗಾಗಿದೆ ಎಂದರೆ ತಪ್ಪಾಗಲಾರದು. ಆದರೆ ಬೇರೆ ರಾಜ್ಯಗಳಲ್ಲಿ ಹಾಗಿಲ್ಲ. ಒಂದೇ ಭಾಷೆಯನ್ನೆ ಮಾತನಾಡುವ ಮೂಲಕ ಭಾಷಾ ಪ್ರೇಮವನ್ನು ಮೆರೆಯುತ್ತಾರೆ. ಕರ್ನಾಟಕದಲ್ಲೂ ಆ ಸಂಸ್ಕೃತಿಯನ್ನು ರೂಢಿಸಿಕೊಂಡರೆ ಕನ್ನಡದ ಬೆಳವಣಿಗೆ ಸಾಧ್ಯ ಎಂದರು.

ಕನ್ನಡ ರಾಜ್ಯೋತ್ಸವ ಸಮಿತಿ ಅಧ್ಯಕ್ಷ ಪ್ರೊ ಎಂ ಜಿ ಭಟ್ ಮಾತನಾಡಿ, ಈ ಸಮಿತಿಯಿಂದ ನುಡಿ ಹಬ್ಬ ಆರಂಭಿಸಿದಾಗ ಕೆಲ ವರ್ಷ ಸಹಕಾರ ದೊರೆಯಲಿಲ್ಲ. ನಂತರದ ದಿನಗಳಲ್ಲಿ ಕಾರ್ಯಕ್ರಮಕ್ಕೆ ಸಾರ್ವಜನಿಕರ ಸಹಕಾರ ದೊರೆಯುತ್ತ ಹೋದಂತೆ ವರ್ಷದಿಂದ ವರ್ಷಕ್ಕೆ ಕಾರ್ಯಕ್ರಮ ಚೆನ್ನಾಗಿ ರೂಪಗೊಳ್ಳುತ್ತ ಯಶಸ್ವಿಯಾಗಿ ನಡೆಯುತ್ತಿದೆ. ನಾವೆಲ್ಲ ಕನ್ನಡಾಭಿಮಾನವನ್ನು ರೂಢಿಸಿಕೊಳ್ಳುವ ಜೊತೆಗೆ ಮುಂದಿನ ತಲೆ ಮಾರಿಗೆ ದಾಟಿಸುವ ಪ್ರಯತ್ನವಾಗಬೇಕು.ಎಂದರು.

ಈ ಸಂದರ್ಭದಲ್ಲಿ ಯಕ್ಷಗಾನ ಕಲಾವಿದ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೃಷ್ಣ ಯಾಜಿ ಬಳ್ಕೂರ, ರಂಗ ಕಲಾವಿದ ಶ್ರೀಕಾಂತ ಪಟಗಾರ ಮತ್ತು ತಾಲೂಕು ಆರೋಗ್ಯಾಧಿಕಾರಿ ಡಾ ಆಜ್ಞಾ ನಾಯಕ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕರಾವಳಿ ಮುಂಜಾವು ಪತ್ರಿಕೆಯ ಪ್ರಧಾನ ಸಂಪಾದಕ ಗಂಗಾಧರ ಹಿರೇಗುತ್ತಿ , ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಮತ್ತು ಜಿಪಂ ನಿಕಟಪೂರ್ವ ಸದಸ್ಯ ಶಿವಾನಂದ ಹೆಗಡೆ ಕಡತೋಕಾ, ಪುರಸಭೆ ಅಧ್ಯಕ್ಷೆ ಮೋಹಿನಿ ಗೌಡ, ವಕೀಲ ಆರ್ ಜಿ ನಾಯ್ಕ, ಕಸಾಪ ನಿಕಟಪೂರ್ವ ಅಧ್ಯಕ್ಷ ಶ್ರೀಧರ ಗೌಡ ಉಪ್ಪಿನ ಗಣಪತಿ, ಬಿಜೆಪಿ ಮಂಡಲಾಧ್ಯಕ್ಷ ಹೇಮಂತಕುಮಾರ ಗಾಂವ್ಕರ್, ಕುಮಟಾ ಅರ್ಬನ್ ಬ್ಯಾಂಕ್ ಅಧ್ಯಕ್ಷ ಧೀರೂ ಶಾನಭಾಗ, ಡಯಟ್ ಪ್ರಾಂಶುಪಾಲ ಈಶ್ವರ ನಾಯ್ಕ, ಇತರರು ಇದ್ದರು.

error: