April 29, 2024

Bhavana Tv

Its Your Channel

ಸಂತ್ರಸ್ತ ಕೊರಗ ಕುಟುಂಬದ ಮದುವೆಯಲ್ಲಿ ಸಚಿವ ಕೋಟ ಬಾಗಿ

ಕುಮಟಾ “: ಸಂತ್ರಸ್ತ ಕೊರಗ ಕುಟುಂಬದ ಮದುವೆಯಲ್ಲಿ ಸಚಿವ ಕೋಟ ಬಾಗಿ. ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದ ಮದುವೆ. ಸಚಿವರಿಗೆ ಕೊರಗ ಜನಾಂಗದವರಿAದ ಡೊಳ್ಳಿನ ಮೂಲಕ ಸಾಂಪ್ರದಾಯಿಕ ಸ್ವಾಗತ.

ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕು ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಗರ ಕೇರಿಯ ಕುಟುಂಬವೊAದರಲ್ಲಿ ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರ ದೌರ್ಜನ್ಯಕ್ಕೆ ಸಂಬoಧಿಸಿದoತೆ ವಿವಾದಗಳು ನಡೆದು ದೌರ್ಜನ್ಯವೆಸಗಿದ ಪೊಲೀಸ್ ಠಾಣೆಯ ಪಿಎಸ್‌ಐ ಅವರ ಅಮಾನತು ಸೇರಿದಂತೆ 5 ಕ್ಕೂ ಹೆಚ್ಚು ಪೊಲೀಸರ ವರ್ಗಾವಣೆ ಮಾಡಿದ್ದು, ಮೇಲಾಧಿಕಾರಿಗಳಿಂದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ನೊಂದ ಕುಟುಂಬದ ವಿವಾಹ ಸಮಾರಂಭದಲ್ಲಿ ಬಾಗಿಯಾಗಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಈ ಕೊರಗ ಜನಾಂಗದ ಕುಟುಂಬಗಳನ್ನು ನಾನು ಹತ್ತಿರದಿಂದ ಕಂಡಿದ್ದು, ಅವರೆಲ್ಲರ ಆತ್ಮೀಯತೆಯನ್ನು ಗಳಿಸಿದ್ದೇನೆ. ನನ್ನೂರ ಭಾಗದಲ್ಲಿ ಇರುವಂತಹ ಏಕೈಕ ಕೊರಗರ ಕೇರಿ ಇದಾಗಿದ್ದು, ಈ ಮುಗ್ಧ ಜನರ ಮೇಲೆ ಹಲ್ಲೆ ನಡೆದದ್ದು ನೋವಿನ ಸಂಗತಿ. ವಿವಾಹದ ಕಾರ್ಯಕ್ರಮವೆಲ್ಲ ಮುಗಿದ ನಂತರ ತಡರಾತ್ರಿ ಆದರೂ ಸಂತ್ರಸ್ಥ ಕುಟುಂಬದವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಲಿದ್ದೇನೆ ಎಂದು ಸಚಿವ ಕೋಟ ತಿಳಿಸಿದರು.

ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಸನಿಹದಲ್ಲಿ ನಡೆದ ವಿವಾಹ ಸಮಾರಂಭಕ್ಕೆ ಸಚಿವರು ಬರುತ್ತಲೇ ನೆರೆದ ನೂರಾರು ಆದಿವಾಸಿ ಕೊರಗ ಜನಾಂಗದವರು ಡೊಳ್ಳು ಮತ್ತು ಚಂಡೆಗಳ ಮೂಲಕ ಸಚಿವರನ್ನು ಸಾಂಪ್ರದಾಯಿಕವಾಗಿ ಬರಮಾಡಿಕೊಂಡು ಸ್ವಾಗತ ನೀಡಿದರು.

ಸಮಾರಂಭದಲ್ಲಿ ಸಚಿವರನ್ನು ಪ್ರೀತಿಯಿಂದ ಬರಮಾಡಿಕೊಂಡಿದ್ದು ಕಂಡುಬAದಿತ್ತು. ಸಚಿವರ ಜೊತೆ ಕುಮಟಾದ ಹಿರಿಯ ಬಿಜೆಪಿ ಪ್ರಮುಖರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

error: