May 3, 2024

Bhavana Tv

Its Your Channel

ಕೊರೋನಾ ನಿಯಮ ಪಾಲನೆಯೊಂದಿಗೆ ಕುಮಟಾ ಪ್ರಗತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ

ಕುಮಟಾ. ಕುಮಟಾ ತಾಲೂಕಿನ ಪ್ರಗತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಚುನಾವಣಾ ಸಾಕ್ಷರತಾ ಕ್ಲಬ್. ಅಡಿಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಿಲಾಯಿತು
ವಿದ್ಯಾರ್ಥಿಗಳಲ್ಲಿ ಮತದಾನದ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಮಹತ್ವ ಪಡೆಯಿತು. ಚುನಾವಣಾ ಸಾಕ್ಷರತಾ ಕ್ಲಬ್ ಸಂಚಾಲಕ ಶ್ರೀ ಮನೋಹರ ಹರಿಕಂತ್ರ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಮತದಾನದ ಮಹತ್ವ ಮತದಾರರ ಜವಾಬ್ದಾರಿ ಮತದಾನದ ವಿಧಾನ ಈ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿ, ಪ್ರತಿಯೊಬ್ಬರೂ ಮುಂದಿನ ದಿನಗಳಲ್ಲಿ ಮತದಾನದ ಹಕ್ಕನ್ನು ಪಡೆದು ಮತ ಚಲಾಯಿಸುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಅತಿಥಿಗಳಾದ ಶಿಕ್ಷಕಿ ಅರ್ಚನಾ ನಾಯ್ಕ ಮಾತನಾಡಿ ವಿದ್ಯಾರ್ಥಿಗಳು ರಾಷ್ಟ್ರೀಯ ಮತದಾರರ ದಿನದ ಮಹತ್ವವನ್ನು ಅರಿತು ಮುಂದಿನ ದಿನದಲ್ಲಿ ಮತ ಚಲಾಯಿಸಲು ಬೇಕಾದ ಅರ್ಹತೆಯನ್ನು, ಜವಾಬ್ದಾರಿಯನ್ನು ನಿರ್ವಹಿಸುವುದರ ಕುರಿತು ವಿವರಿಸಿ ಪ್ರಜಾಪ್ರಭುತ್ವ ದೇಶ ಭಾರತದಲ್ಲಿ ಮತದಾನದ ವ್ಯವಸ್ಥೆ ಮತದಾರರ ಕರ್ತವ್ಯ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಿಕ್ಷಕ ಜಿ ಆರ್ ನಾಯ್ಕ ಶಾಲೆಯಲ್ಲಿ ಈ ಮಹತ್ವದ ದಿನದ ಆಚರಣೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ವಿದ್ಯಾರ್ಥಿಗಳು ಈ ದಿನದ ಮಹತ್ವವನ್ನು ಅರಿತು ಮುಂದಿನ ದಿನಗಳಲ್ಲಿ ಭಾರತ ಜವಾಬ್ದಾರಿಯುತ ಪ್ರಜೆಯಾಗಿ ತಮ್ಮ ಕರ್ತವ್ಯಗಳನ್ನು ಅರಿತು ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದು ಯಾವುದೇ ಆಮಿಷಕ್ಕೆ ಒಳಗಾಗದೆ ನೈತಿಕತೆಯಿಂದ ತಮ್ಮ ಹಕ್ಕನ್ನು ಚಲಾಯಿಸಿ ಉತ್ತಮ ನಾಯಕನನ್ನು ಆಯ್ಕೆ ಮಾಡಿ ದೇಶದ ಉಜ್ವಲ ಭವಿಷ್ಯಕ್ಕಾಗಿ ನಾಂದಿ ಹಾಡಬೇಕೆಂದು ಕರೆ ನೀಡಿದರು
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯಾಧ್ಯಾಪಕರಾದ ಶ್ರೀ ವಿವೇಕ್ ಆಚಾರಿ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಹೆಚ್ಚು ಜ್ಞಾನವನ್ನು ಪಡೆದು, ಜವಾಬ್ದಾರಿಯಿಂದ ಮುಂದಿನ ಕಾರ್ಯಗಳಲ್ಲಿ ಪಾಲ್ಗೊಳ್ಳಬೇಕು. ಈಗಾಗಲೇ ಪಡೆದ ಜ್ಞಾನವನ್ನು ಇತರರಿಗೆ ತಲುಪಿಸುವ ಮೂಲಕ ಭವ್ಯ ಭಾರತದ ಕನಸನ್ನು ನನಸಾಗಿಸಬೇಕು ವಿದ್ಯಾರ್ಥಿ ಜೀವನದಲ್ಲಿಯೇ ಇಂತಹ ಜವಾಬ್ದಾರಿಯನ್ನು ನಿರ್ವಹಿಸುವುದರ ಮೂಲಕ ನಾಳೆ ಉತ್ತಮ ಸಮಾಜ ನಿರ್ಮಿಸುವಲ್ಲಿ ನಿಮ್ಮ ಪಾತ್ರ ಬಹುಮುಖ್ಯವಾದದ್ದು ಎಂಬ ಸಂದೇಶ ನೀಡಿದರು.
ವೇದಿಕೆಯ ಮೇಲೆ ಶಿಕ್ಷಕಿ ಶ್ರೀಮತಿ ಮಮತಾ ಕೆ.ಎಸ್. ಉಪಸ್ಥಿತರಿದ್ದರು.
ಕೊರೋನೋ ನಿಯಮದಂತೆ ನಡೆದ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕುಮಾರಿ
ವರ್ಷಿಣಿ ಹೆಗಡೆ ಸ್ವಾಗತಿಸಿದಳು. ಕುಮಾರಿ ರಶ್ಮಿ ಭಟ್ಟ ವಂದಿಸಿದಳು. ಕುಮಾರಿ ವಿದ್ಯಾ ಹೆಗಡೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದಳು.
ಭಾರತದ ಚುನಾವಣಾ ಆಯೋಗವು ಮತದಾರರಲ್ಲಿ ಜಾಗೃತಿ ಮೂಡಿಸಲು ನಡೆಸಿದ ತಾಲೂಕ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಾದ ಕುಮಾರಿ ಡಿ. ಎಸ್. ದೀಕ್ಷಾ ಹಾಗೂ ಕುಮಾರಿ ಕೆಎಸ್ ಮನೀಶ ಹಾಗೂ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಕುಮಾರ್ ಆದಿತ್ಯ ಎ ಜಿ ಈ ವಿದ್ಯಾರ್ಥಿಗಳನ್ನು ಸ್ಮರಿಸಲಾಯಿತು.

error: