May 15, 2024

Bhavana Tv

Its Your Channel

ರಾಯಚೂರು ಜಿಲ್ಲಾ ನ್ಯಾಯಾಧೀಶರ ವಿರುದ್ಧ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕುಮಟಾ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ

ಕುಮಟಾ: ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ರಾಯಚೂರು ಜಿಲ್ಲಾ ನ್ಯಾಯಾಧೀಶರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಕುಮಟಾ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.

ಕುಮಟಾ ಪಟ್ಟಣದ ಪಿಡಬ್ಲುಡಿ ಐಬಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಸಮಿತಿಯ ಪದಾಧಿಕಾರಿಗಳು, ಸದಸ್ಯರು ತಹಸೀಲ್ದಾರ್ ಕಚೇರಿಗೆ ತೆರಳಿವಿವೇಕ ಶೇಣ್ವಿ ಅವರನ್ನು ಭೇಟಿ ಮಾಡಿದರು. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರು ಡಾ. ಬಿ ಆರ್ ಅಂಬೇಡ್ಕರ ಅವರ ಫೋಟೊ ತೆಗೆದರೆ ಮಾತ್ರ ನಾನು ಧ್ವಜಾರೋಹಣ ಮಾಡುತ್ತೇನೆ ಎಂದು ಬಾಬಾ ಸಾಹೇಬ ಅವರ ಪೋಟೊ ತೆಗೆಯುವ ಮೂಲಕ ಸಂವಿಧಾನ ಶಿಲ್ಪಿಗೆ ಅವಮಾನ ಮಾಡಿದ್ದಾರೆ. ಮಲ್ಲಿಕಾರ್ಜುನನಂತಹ ವ್ಯಕ್ತಿ ನ್ಯಾಯಾಧೀಶರ ಸ್ಥಾನದಲ್ಲಿ ಕೂರಲು ಯೋಗರಲ್ಲ. ಅವರನ್ನು ತಕ್ಷಣ ಆ ಮಹಾನ್ ಸ್ಥಾನದಿಂದ ವಜಾಗೊಳಿಸಬೇಕು. ಅವರ ಸನತ್‌ನ್ನು ಸರ್ಕಾರ ವಾಪಸ್ ಪಡೆಯಬೇಕು. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದಲಿತ ಸಂಘರ್ಷ ಸಮಿತಿ ನೀಡಿದ ಮನವಿಯಲ್ಲಿ ಆಗ್ರಹಿಸಲಾಗಿದೆ.
ಮನವಿ ಸ್ವೀಕರಿಸಿದ ತಹಸೀಲ್ದಾರ್ ವಿವೇಕ ಶೇಣ್ವಿ ಅವರು ಈ ಮನವಿಯನ್ನು ರಾಜ್ಯಪಾಲರಿಗೆ ಮತ್ತು ಮುಖ್ಯಮಂತ್ರಿಗಳಿಗೆ ರವಾನಿಸುವುದಾಗಿ ತಿಳಿಸಿದರು.
ಮನವಿ ಸಲ್ಲಿಕೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕುಮಟಾ ಅಧ್ಯಕ್ಷರಾದ ಮಂಜುನಾಥ ಜಿ ಆಗೇರ, ಉಪಾಧ್ಯಕ್ಷರಾದ ಶಂಕರ ಅಡಿಗುಂಡಿ, ಪ್ರಧಾನ ಕಾರ್ಯದರ್ಶಿ ಶೇಖರ ಹಳ್ಳೇರ, ಖಜಾಂಚಿ ಮಂಜುನಾಥ ಎಲ್ ಆಗೇರ, ಪ್ರಮುಖರಾದ ನೇಮಯ್ಯ ಮುಕ್ರಿ, ಮಹಾಬಲೇಶ್ವರ ಮುಕ್ರಿ, ಎಚ್ ಎನ್ ವಿಠಲ್, ರಾಘವೇಂದ್ರ ಮುಕ್ರಿ, ಇತರರು ಇದ್ದರು.

error: