May 3, 2024

Bhavana Tv

Its Your Channel

ಫೆ.8ರಂದು ಸರಳವಾಗಿ ನಡೆಯಲಿದೆ ಕುಮಟಾ ಜಾತ್ರೆ

ಕುಮಟಾ ಪಟ್ಟಣದ ರಥ ಬೀದಿಯಲ್ಲಿ ನೆಲೆಸಿರುವ ಶ್ರೀ ಮುಖ್ಯಪ್ರಾಣಾಂತರ್ಗತ ಶ್ರೀ ಲಕ್ಷ್ಮಿ ವೆಂಕಟರಮಣ ದೇವರ ಮಹಾ ರಥೋತ್ಸವ ಕುಮಟಾ ಜಾತ್ರೆ ಫೆ.8ರಂದು ಸರಳವಾಗಿ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ಮೊಕ್ತೇಸರ್ ವಸುದೇವ ಪ್ರಭು ತಿಳಿಸಿದರು.

ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿದ ಅವರು, ದೇವರ ಅನುಗ್ರಹ, ನಮ್ಮ ಗುರುಗಳ ಆಶೀರ್ವಾದ ಮತ್ತು ಭಕ್ತರ ಸಹಕಾರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಲಕ್ಷ್ಮಿ ವೆಂಕಟರಮಣ ದೇವರ ಮಹಾ ರಥೋತ್ಸವ ಫೆ.8ರಂದು ನಡೆಯಲಿದೆ. ಜಾತ್ರೆಯ ಸಿದ್ಧತೆಯನ್ನು ಈಗಾಗಲೇ ಆರಂಭಿಸಿದ್ದೇವೆ. ಜಾತ್ರೆಯ ಧಾರ್ಮಿಕ ವಿಧಿವಿಧಾನಗಳು ಫೆ.5ರಿಂದ ಆರಂಭಗೊAಡು, ಫೆ.10ರ ವರೆಗೆ ನಡೆಯಲಿದೆ. ಫೆ.8ಕ್ಕೆ ಮಹಾರಥೋತ್ಸವ ಮತ್ತು ಫೆ.10ರಂದು ನಮ್ಮ ಗುರುಗಳ ಪುಷ್ಪ ರಥೋತ್ಸವ ನಡೆಯಲಿದೆ. ಕೋವಿಡ್ ಸಾಂಕ್ರಾಮಿಕ ರೋಗದ ಕಾರಣ ಕುಮಟಾ ಜಾತ್ರೆಯನ್ನು ಸರಳವಾಗಿ ಆಚರಿಸಲಾಗುವುದು. ಕೋವಿಡ್ ಸುರಕ್ಷತಾ ನಿಯಮಾವಳಿಗಳಾದ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳಲಾಗುವುದು. ಈ ಧಾರ್ಮಿಕ ಕಾರ್ಯಕ್ರಮ ಯಶಸ್ವಿಗೊಳ್ಳುವಂತೆ ಕುಮಟಾ ಜನತೆ ಸಹಕಾರ ನೀಡಬೇಕೆಂದು ವಿನಂತಿಸಿದರು.

ಇದಕ್ಕೆ ಸಂಬAದಿಸಿ ಕುಮಟಾ ಪುರಸಭೆ ಮುಖ್ಯಾಧಿಕಾರಿ ಸುರೇಶ ಎಂ ಕೆ ಅವರು ಮಾದ್ಯಮದವರೊಂದಿಗೆ ಮಾತನಾಡಿ ಕುಮಟಾ ಜಾತ್ರೆಯನ್ನು ಕೋವಿಡ್ ನಿಯಮಾವಳಿಗಳ ಪ್ರಕಾರ ಸರಳವಾಗಿ ನಡೆಸುವಂತೆ ದೇವಸ್ಥಾನದ ಆಡಳಿತ ಮಂಡಳಿಗೆ ತಿಳಿಸಿದ್ದೇವೆ. ಅವರು ಕೂಡ ಒಪ್ಪಿಕೊಂಡಿದ್ದಾರೆ. ಇನ್ನೂ ಜಾತ್ರ ಅಂಗಡಿಗೆ ನಿರ್ಬಂಧ ನೀಡಿದೆ ಜಾತ್ರೆಯಲ್ಲಿ ಪಾಲ್ಗೊಳ್ಳುವ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸುವ ಜೊತೆಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಮಾಸ್ಕ್ ಧರಿಸದ ವ್ಯಕ್ತಿಗಳಿಗೆ ಪುರಸಭೆ ಮತ್ತು ಪೊಲೀಸ್ ಇಲಾಖೆಯಿಂದ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

error: