May 13, 2024

Bhavana Tv

Its Your Channel

ನೆಲ್ಲಿಕೇರಿಯ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿಗಳಿಗೆ ಆಹಾರ ಸಾಮಗ್ರಿ ವಿತರಿಸುವ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ದಿನಕರ ಶೆಟ್ಟಿ

ಕುಮಟಾ: ಪಟ್ಟಣದ ನೆಲ್ಲಿಕೇರಿಯ ಪಬ್ಲಿಕ್ ಸ್ಕೂಲ್‌ನಲ್ಲಿ ವಿದ್ಯಾರ್ಥಿಗಳಿಗೆ ಆಹಾರ ಸಾಮಗ್ರಿ ವಿತರಿಸುವ ಕಾರ್ಯಕ್ರಮವನ್ನು ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿದರು.

ಆಹಾರ ಸಾಮಗ್ರಿಗಳನ್ನು ಎಲ್‌ಕೆಜಿ, ಯುಕೆಜಿ ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದ ಶಾಸಕರು, ಸರ್ಕಾರ ಅಂಗನವಾಡಿ ಮಕ್ಕಳಿಗೆ ಆಹಾರ ಒದಗಿಸುತ್ತಿದೆ. ಅಂತೆಯೇ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿರುವ ಎಲ್‌ಕೆಜಿ, ಯುಕೆಜಿ ಮಕ್ಕಳಿಗೂ ಆಹಾರ ಪದಾರ್ಥಗಳನ್ನು ನೀಡಬೇಕೆಂದು ಸದುದ್ದೇಶದಿಂದ ನಮ್ಮ ಸರ್ಕಾರ ೮೫೫ ರೂ. ಮೌಲ್ಯದ ಆಹಾರ ಕಿಟ್‌ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿದೆ. ಈ ಮೂಲಕ ಪುಟಾಣಿ ಮಕ್ಕಳಲ್ಲಿ ಆತ್ಮ ವಿಶ್ವಾಸ ಮೂಡಿಸುವ ಕಾರ್ಯವಾಗಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಆರ್ ಎಲ್ ಭಟ್ ಮಾತನಾಡಿ, ಮಕ್ಕಳಿಗೆ ಶಿಕ್ಷಣದ ಜೊತೆಗೆ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕೆಂಬ ಸದುದ್ದೇಶದಿಂದ ಈ ಆಹಾರ ಸಾಮಗ್ರಿಗಳ ಕಿಟ್ ನೀಡಲಾಗಿದೆ. ಮಕ್ಕಳಿಗೆ ಅಗತ್ಯವಾದ ಎಲ್ಲ ಪೋಷಕಾಂಶಗಳುಳ್ಳ ಆಹಾರ ಪದಾರ್ಥಗಳು ಈ ಕಿಟ್‌ನಲ್ಲಿದೆ. ಇನ್ನು ಆಂಗ್ಲ ಶಿಕ್ಷಣ ಬಡ ಮಕ್ಕಳಿಗೆ ಗಗನ ಕುಸುಮವಾಗಿತ್ತು. ಬಡ ಮಕ್ಕಳಿಗೂ ಆಂಗ್ಲ ಶಿಕ್ಷಣ ಕೊಡಬೇಕೆಂಬ ಸದುದ್ದೇಶದಿಂದಲೇ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತೆರೆಯುವ ಮೂಲಕ ಗುಣಮಟ್ಟದ ಶಿಕ್ಷಣ ಒದಗಿಸಲಾಗುತ್ತಿದೆ. ಬಡ ಮಕ್ಕಳು ಇದರ ಸದುಪಯೋಗ ಪಡೆಯಬೇಕು ಎಂದರು.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುಖ್ಯಧ್ಯಾಪಕಿ ಮಂಗಲ ನಾಯಕ, ಸರ್ಕಾರಿ ಪ್ರೌಢ ಶಾಲೆಯ ಮುಖ್ಯಾಧ್ಯಾಪಕ ಶಿವಾನಂದ ಭಟ್, ಎಸ್‌ಡಿಎಂಸಿಯ ಲಕ್ಷಿöÃ, ಬಿಇಒ ಕಚೇರಿಯ ರೇಖಾ ನಾಯ್ಕ, ಪಾಲಕರು, ಪುಟಾಣಿ ಮಕ್ಕಳು ಇದ್ದರು.

ವರದಿ: ನಟರಾಜ ಗದ್ದೆಮನೆ ಕುಮಟಾ

error: