May 3, 2024

Bhavana Tv

Its Your Channel

ಸಾಮರ್ಥ್ಯಾಭಿವೃದ್ಧಿ ತರಬೇತಿ ಕಾರ್ಯಗಾರ

ಕುಮಟಾ: ಜಿಲ್ಲಾಡಳಿತ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮತ್ತು ಕುಮಟಾ ಪುರಸಭೆ ವತಿಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ಮತ್ತು ಪಟ್ಟಣ ಮಾರಾಟ ಸಮಿತಿ ಸದಸ್ಯರುಗಳಿಗೆ ಹಮ್ಮಿಕೊಂಡ ಸಾಮರ್ಥ್ಯಾಭಿವೃದ್ಧಿ ತರಬೇತಿ ಕಾರ್ಯಗಾರಕ್ಕೆ ಪುರಸಭೆ ಸದಸ್ಯೆ ಅನುರಾಧ ಬಾಳೇರಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಬೀದಿ ಬದಿಯ ವ್ಯಾಪಾರಿಗಳ ವ್ಯಾಪಾರ ವೃದ್ಧಿ ಮಾಡುವ ಸಂಬAಧ ಈ ತರಬೇತಿ ಹಮ್ಮಿಕೊಂಡಿದ್ದು, ಇದರ ಪ್ರಯೋಜನ ಪಡೆಯುವಂತೆ ತಿಳಿಸಿದರು. ಆರ್ಥಿಕ ಸಾಕ್ಷರತಾ ಸಮಾಲೋಚಕ ದೀಪಕ ಮೇಸ್ತಾ ಅವರು ಡಿಜಿಟಲ್ ವ್ಯವಹಾರದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಪುರಸಭೆ ಸಮುದಾಯ ಸಂಘಟಕಿ ಮೀನಾಕ್ಷಿ ಆಚಾರಿ ಮಾತನಾಡಿ, ನಲ್ಮ ಯೋಜನೆ ಮತ್ತು ಬೀದಿ ವ್ಯಾಪಾರಿಗಳಿಗೆ ನೀಡಲಾಗುತ್ತಿರುವ ತರಬೇತಿಯ ಪ್ರಯೋಜನಗಳ ಬಗ್ಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷ ವಹಿಸಿದ್ದ ಪಟ್ಟಣ ಮಾರಾಟ ಸಮಿತಿ ಅಧ್ಯಕ್ಷ ಮತ್ತು ಪುರಸಭೆ ಮುಖ್ಯಾಧಿಕಾರಿ ಸುರೇಶ ಎಂ ಕೆ ಅವರು ಮಾತನಾಡಿ, ಡೇ-ನಲ್ಮ ಯೋಜನೆಯಡಿ ಈ ಕಾರ್ಯಗಾರವನ್ನು ಹಮ್ಮಿಕೊಂಡಿದ್ದು, ಬೀದಿ ಬದಿ ವ್ಯಾಪಾರಿಗಳು ತರಬೇತಿಯ ಪ್ರಯೋಜನ ಪಡೆದು, ವ್ಯಾಪಾರ ವೃದ್ಧಿಸಿಕೊಳ್ಳುವಂತೆ ತಿಳಿಸಿದರು.
ಕಾರ್ಯಗಾರದಲ್ಲಿ ಕೆನರಾ ಬ್ಯಾಂಕ್ ಆರ್‌ಸೆಟಿ ನಿರ್ದೇಶಕ ಸಿ ಕೆ ರವಿ, ವಕೀಲೆ ರಾಘವಿ ನಾಯಕ, ಆರೋಗ್ಯ ಇಲಾಖೆ ಅಧಿಕಾರಿ ಆರ್ ಜಿ ನಾಯ್ಕ ಇತರರು ಇದ್ದರು.

error: