May 1, 2024

Bhavana Tv

Its Your Channel

ಹೆಗಡೆ ಗ್ರಾ.ಪಂ ವ್ಯಾಪ್ತಿಯ ಮಾಸೂರಿನಲ್ಲಿ “ಕಂದಾಯ ದಾಖಲೆ ಮನೆ ಬಾಗಿಲಿಗೆ” ವಿನೂತನ ಕಾರ್ಯಕ್ರಮ

ಕುಮಟಾ: ಪಹಣಿ, ಅಟ್ಲಾಸ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳ ಮುದ್ರಣಗಳು ರೈತರಿಗೆ ಬಹಳ ಮುಖ್ಯವಾಗಿರುತ್ತದೆ. ಇದೆ ಕಾರಣದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ ಮಾರ್ಗದರ್ಶದಲ್ಲಿ ರಾಜ್ಯಾದ್ಯಂತ “ಕಂದಾಯ ದಾಖಲೆ ಮನೆ ಬಾಗಿಲಿಗೆ ಎಂಬ ಕಾರ್ಯಕ್ರಮದಲ್ಲಿ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು.

ಅವರು ಕುಮಟಾ ತಾಲೂಕಿನ ಹೆಗಡೆ ಗ್ರಾ.ಪಂ ವ್ಯಾಪ್ತಿಯ ಮಾಸೂರಿನಲ್ಲಿ “ಕಂದಾಯ ದಾಖಲೆ ಮನೆ ಬಾಗಿಲಿಗೆ” ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು. ಅಭಿವೃದ್ಧಿ ಕಾರ್ಯದ ಜತೆಗೆ ಪ್ರತಿ ಮನೆಗೂ ಕಂದಾಯ ಇಲಾಖೆಯ ದಾಖಲೆ ನೀಡಲಾಗುತ್ತಿದೆ. ಕುಮಟಾದ ಕಂದಾಯ ಇಲಾಖೆಯು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಿ, ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ ಎಂದರು.

ಕೆಲವಷ್ಟು ಜನರು ದಾಖಲೆಗಳನ್ನು ನೋಡಿಯೇ ಇರುವುದಿಲ್ಲ. ಜನರಲ್ಲಿಯೂ ಜಾಗೃತಿ ಮೂಡಲಿ ಎಂಬ ಉದ್ದೇಶವನ್ನಿಟ್ಟುಕೊಂಡು ಈ ಯೋಜನೆ ಅನುಷ್ಠಾನಗೊಂಡಿದೆ ಎಂದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ರಾಹುಲ ಪಾಂಡೆ, ತಹಸೀಲ್ದಾರ ವಿವೇಕ ಶೇಣ್ವಿ, ಗ್ರೇಡ್-2 ತಹಸೀಲ್ದಾರ ಅಶೋಕ ಭಟ್ಟ, ಬಿಜೆಪಿ ಮಂಡಲಾಧ್ಯಕ್ಷ ಹೇಮಂತಕುಮಾರ ಗಾಂವಕರ, ಹೆಗಡೆ ಗ್ರಾ.ಪಂ ಅಧ್ಯಕ್ಷೆ ಚಂದ್ರಕಲಾ ನಾಯ್ಕ, ಸದಸ್ಯ ಮಂಜುನಾಥ ಪಟಗಾರ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

error: