May 17, 2024

Bhavana Tv

Its Your Channel

ನಾರಾಯಣಗುರುಗಳ ಪಾಠ ಪಠ್ಯದಲ್ಲಿದ್ದು, ಯಾವುದೇ ಕಾರಣಕ್ಕೂ ತೆಗೆಯುವ ಮಾತೆ ಇಲ್ಲ – ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಕುಮಟಾ : ಸರ್ವರು ಒಪ್ಪಿಕೊಳ್ಳುವ ಮಹಾನ್ ಗುರುಗಳಾದ ನಾರಾಯಣಗುರುಗಳ ಪಾಠ ಪಠ್ಯದಲ್ಲಿದ್ದು, ಯಾವುದೇ ಕಾರಣಕ್ಕೂ ತೆಗೆಯುವು ಮಾತೆ ಇಲ್ಲ ಕಾಂಗ್ರೆಸ್ ನಾಯಕರು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು

ಕುಮಟಾ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದರು. ನಾರಾಯಣ ಗುರುಗಳಿಗೆ ಗೌರವ ನೀಡುವ ಉದ್ದೇಶದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯದ ಬಿಜೆಪಿ ಸರ್ಕಾರ ನಾರಾಯಣ ಗುರುಗಳ ಹೆಸರಿನಲ್ಲಿ 28 ಕೋಟಿ ರೂ. ವೆಚ್ಚದಲ್ಲಿ ಉತ್ತರಕನ್ನಡ, ಮಂಗಳೂರು, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ವಸತಿ ಶಾಲೆ ನಿರ್ಮಿಸುತ್ತಿದೆ. ಪ್ರತಿಪಕ್ಷಗಳ ಟೀಕೆಯಲ್ಲಿ ಯಾವುದೇ ಹುರುಳಿಲ್ಲ ಎಂದರು.

ನೆರೆ ಹಾನಿಯನ್ನು ಸಮರ್ಥವಾಗಿ ನಿಭಾಯಿಸಲಾಗುತ್ತಿದೆ. ಜಿಲ್ಲೆಯಲ್ಲಿ 2 ಪ್ರಾಣಹಾನಿಯಾಗಿದ್ದು, 3 ಜಾನುವಾರುಗಳು ಸಾವನ್ನಪ್ಪಿದೆ. 2 ಮನೆಗಳು ಸಂಪೂರ್ಣ ಹಾನಿಯಾಗಿದ್ದು, ಪ್ರಥಮ ಹಂತದಲ್ಲಿ ತಲಾ 90 ಸಾವಿರ ರೂ. ಪರಿಹಾರ ನೀಡಲಾಗಿದೆ. 29 ಮನೆಗಳು ಭಾಗಷಃ ಹಾನಿಯಾಗಿದ್ದು, ಅವುಗಳಿಗೂ ಪರಿಹಾರ ನೀಡಲಾಗಿದೆ. 235 ವಿದ್ಯುತ್ ಕಂಬ ಮತ್ತು 27 ಟ್ರಾನ್ಸಫಾರಮ್‌ಗಳು ಹಾನಿಯಾಗಿದ್ದು, ಒಟ್ಟೂ 38 ಲಕ್ಷ ರೂ. ಹಾನಿಯ ಪ್ರಮಾಣವನ್ನು ಅಂದಾಜಿಸಲಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 4.92 ಕೋಟಿ ರೂ. ಹಣವಿದ್ದು, ಸಮರೋಪಾಧಿಯಲ್ಲಿ ಕೆಲಸ ನಿರ್ವಹಿಸಲಾಗುತ್ತಿದೆ

ಈ ಸಂದರ್ಭದಲ್ಲಿ ಶಾಸಕ ದಿನಕರ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ಜಿ.ಪಂ ಮಾಜಿ ಸದಸ್ಯ ಗಜಾನನ ಪೈ, ಪುರಸಭಾ ಅಧ್ಯಕ್ಷೆ ಅನುರಾಧಾ ಬಾಳೇರಿ, ಉಪಾಧ್ಯಕ್ಷೆ ಸುಮತಿ ಭಟ್ಟ, ಪುರಸಭಾ ಸದಸ್ಯ ತುಳುಸು ಗೌಡ, ಪ್ರಮುಖರಾದ ಎನ್.ಎಸ್.ಹೆಗಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯ್ಕ, ಹಿಂದುಳಿದ ಮೋರ್ಚಾ ತಾಲೂಕಾಧ್ಯಕ್ಷ ವಿಶ್ವನಾಥ ನಾಯ್ಕ ಸೇರಿದಂತೆ ಮತ್ತಿತರರು ಇದ್ದರು.

ಇನ್ನೂ ಮೂರೂರು ಗ್ರಾಮ ಪಂಚಾಯ್ತಿ ಸದಸ್ಯ, ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಶ್ರೀಧರ ಹೆಗಡೆ ಅವರು ಬಿಜೆಪಿ ಆಡಳಿತ ಮೆಚ್ಚಿ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕ ದಿನಕರ ಶೆಟ್ಟಿ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು.

error: