April 20, 2024

Bhavana Tv

Its Your Channel

ಹಿರೇಗುತ್ತಿ ಹೈಸ್ಕೂಲಿನಲ್ಲಿ ವಿದ್ಯಾರ್ಥಿಗಳ ಪಾಲಕರ ಸಭೆ ಆಯೋಜನೆ

ಕುಮಟಾ: “ವಿದ್ಯಾರ್ಥಿಗಳ ಕಲಿಕೆಯಲ್ಲಿ ಶಿಕ್ಷಕರ ಜೊತೆಗೆ ಪಾಲಕರ ಜವಬ್ದಾರಿಯೂ ಅತೀ ಮುಖ್ಯ ಪ್ರಯತ್ನ ಮತ್ತು ಶೃದ್ಧೆಯಿಂದ ಎಂತಹ ವಿದ್ಯೆಯನ್ನಾದರೂ ಕರಗತ ಮಾಡಿಕೊಳ್ಳಬಹುದು” ಎಂದು ಹಿರೇಗುತ್ತಿ ಹೈಸ್ಕೂಲ್ ಆಡಳಿತ ಮಂಡಳಿ ಮಹಾತ್ಮಗಾಂಧೀ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಹೊನ್ನಪ್ಪ ಎನ್ ನಾಯಕ ನುಡಿದರು.
ಅವರು ಹಿರೇಗುತ್ತಿ ಸೆಕೆಂಡರಿ ಹೈಸ್ಕೂಲಿನಲ್ಲಿ ನಡೆದ ಪಾಲಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತ “ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳ ಶಿಕ್ಷಣದ ಗುಣಮಟ್ಟ ಹಾಗೂ ಕಲಿಕೆಯಲ್ಲಿ ಮಕ್ಕಳ ಫಲಿತಾಂಶದ ಗುಣಮಟ್ಟ ಮತ್ತು ಭವಿಷ್ಯ ಹಾಗೂ ಪರೀಕ್ಷಾ ದೃಷ್ಟಿಯಿಂದಲೂ ತಮ್ಮ ಮಕ್ಕಳನ್ನು ಯಾವ ರೀತಿಯ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂಬುವುದರ ಉದ್ದೇಶದಿಂದ ಪಾಲಕರ ಸಭೆಯನ್ನು ಆಯೋಜಿಸಿದ್ದೇವೆ” ಎಂದರು.
ಮೋಹನ ಬಿ ಕೆರೆಮನೆ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಮಾತನಾಡಿ “ವಿದ್ಯೆ ಯಾರೊಬ್ಬನ ಆಸ್ತಿಯಲ್ಲ ಅದು ಸಾರ್ವತ್ರಿಕ ಮತ್ತು ಸಮದರ್ಶಿ ಅದು ಪ್ರಯತ್ನ ಮತ್ತು ಶೃದ್ಧೆಯಿಂದ ಫಲಿಸುವಂತಹದು” ಹಿಂದೆ ಗುರುಕುಲ ಶಿಕ್ಷಣ ಪದ್ಧತಿ ಇತ್ತು. ಗುರುವಿನ ಹತ್ತಿರ ಹೋಗಿ ಅವರ ಸೇವೆಯಲ್ಲಿ ತೊಡಗಿ ಶಿಕ್ಷಣ ಹೊಂದಬೇಕಾಗಿತ್ತು ಸ್ವಲ್ಪ ಕಾಲದ ನಂತರ ‘ಛಡಿಯಾಮ ಛಂ,,….ಛA ವಿದ್ಯಾಯ ಘಂ ಘಂ ಬಂತು. ಈಗ ಶಿಕ್ಷಣ ಮಕ್ಕಳ ಹಕ್ಕಾಗಿದೆ” ಎಂದರು.
ಹೈಸ್ಕೂಲ್ ಮುಖ್ಯಾಧ್ಯಾಪಕ ರೋಹಿದಾಸ ಎಸ್ ಗಾಂವಕರÀ ಮಾತನಾಡಿ “ಸುಖಾರ್ಥಿಯಾದವನು ವಿದ್ಯೆಯನ್ನು ಬಿಡಬೇಕು, ವಿದ್ಯಾರ್ಥಿಯಾದವನು ಸುಖವನ್ನು ಬಿಡಬೆಕು, ಸುಖಾರ್ಥಿಯಾದವನಿಗೆ ವಿದ್ಯೆ ಎಲ್ಲಿಂದ? ಮತ್ತು ವಿದ್ಯಾರ್ಥಿಯಾದವನಿಗೆ ಸುಖ ಎಲ್ಲಿಂದ? ಸಮಯ ಮತ್ತು ಗುರಿ ಇವೆರಡೂ ವಿದ್ಯಾರ್ಥಿಗಳಿಗೆ ಅತ್ಯಂತ ಪ್ರಮುಖವಾದದ್ದು” ಎಂದರು.
ಪ್ರಾಸ್ತಾವಿಕ ನುಡಿಗಳನ್ನಾಡಿದ ಎನ್ ರಾಮು ಹಿರೇಗುತ್ತಿ “ವಿದ್ಯೆಯನ್ನು ಯಾರು ಹೊಂದುತ್ತಾರೋ, ಅರ್ಥೈಸಿಕೊಳ್ಳುತ್ತಾರೋ ಅವರೇ ವಿದ್ಯಾರ್ಥಿಗಳು, ಪ್ರಯತ್ನ ಮತ್ತು ಶೃದ್ಧೆಯಿಂದ ಎಂತಹ ವಿದ್ಯೆಯನ್ನಾದರೂ ಕರಗತ ಮಾಡಿಕೊಳ್ಳಬಹುದು” ಎಂದರು.
ವಿದ್ಯಾರ್ಥಿ ಪಾಲಕ ಪ್ರತಿನಿಧಿ ಗಣಪತಿ ಗುನಗಾ ಮೊಗಟಾ ಮಾತನಾಡಿ ಶಿಕ್ಷಣ ಕಾರ್ಯದಲ್ಲಿ ಬಾಲಕ-ಪಾಲಕ-ಶಿಕ್ಷಕ ಕಾಯ, ವಾಚಾ, ಮನಸ್ಸಾ ತೊಡಗಿಸಿಕೊಂಡಾಗ ಮಾತ್ರ ವಿದ್ಯಾರ್ಥಿಗಳು ಯಶಸ್ಸು ಪಡೆಯಲು ಸಾಧ್ಯ. ನಾನು ಕಲಿತ ಹೈಸ್ಕೂಲ್ ಆಧುನಿಕತೆಗೆ ತಕ್ಕಂತೆ ಶಿಕ್ಷಣ ನೀಡುತ್ತಿರುವುದು ನನಗೆ ತುಂಬಾ ಹೆಮ್ಮೆ ಅನಿಸಿದೆ” ಎಂದರು.
ಕಾರ್ಯಕ್ರಮದ ವೇದಿಕೆಯಲ್ಲಿ ಸುಮಿತ್ರಾ ಗೌಡ ಮಾಜಿ ಅಧ್ಯಕ್ಷರು ಗ್ರಾ.ಪಂ ತೊರ್ಕೆ, ಶಿಕ್ಷಕರಾದ ಬಾಲಚಂದ್ರ ಹೆಗಡೆಕರ, ವಿಶ್ವನಾಥ ಬೇವಿನಕಟ್ಟಿ, ನಾಗರಾಜ ನಾಯಕ, ಮಹಾದೇವ ಗೌಡ, ಬಾಲಚಂದ್ರ ಅಡಿಗೋಣ, ಇಂದಿರಾ ನಾಯಕ, ಶಿಲ್ಪಾ ನಾಯಕ, ಜಾನಕಿ ಗೊಂಡ, ಮದನ ನಾಯಕ, ಕವಿತಾ ಅಂಬಿಗ ಉಪಸ್ಥಿತರಿದ್ದರು. ನಾಗಶ್ರೀ ಸಂಗಡಿಗರು ಸ್ವಾಗತಗೀತೆ ಹಾಡಿದರು. ಕಾಂಚಿಕಾ ನಾಯಕ ಕಾರ್ಯಕ್ರಮ ನಿರ್ವಹಿಸಿದರು. ವಿಜೇತ ಗುನಗ ವಂದಿಸಿದರು. ಗೋಪಾಲಕೃಷ್ಣ ಗುನಗ ಹಾಗೂ ಗೋವಿಂದ ನಾಯ್ಕ ಸಹಕರಿಸಿದರು.ಎಲ್ಲಾ ವಿದ್ಯಾರ್ಥಿಗಳ ಪಾಲಕ ಪೋಷಕರು ಹಾಜರಿದ್ದರು.

error: