May 4, 2024

Bhavana Tv

Its Your Channel

ಕುಮಟಾ ತಾಲೂಕಾ ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ

ಕುಮಟಾ :ವೈಯಕ್ತಿಕ ತಿದ್ದಿಕೊಂಡು ಹೊಂದಾಣಿಕೆಯ ಮನೋಭಾವವನ್ನು ಬೆಳೆಸಿಕೊಳ್ಳಲು ಕ್ರೀಡೆ ನೆರವಾಗುತ್ತದೆ. ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಈ ಮೂಲಕ ಧೈರ್ಯ ಮತ್ತು ಸಾಹಸ ಗುಣಗಳನ್ನು ವೃದ್ಧಿಸುತ್ತದೆ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು

ಗಾಂಧಿವನ ಕ್ರೀಡಾಂಗಣ ಕಡ್ಲೆ ಯಲ್ಲಿ ನಡೆದ ಪದವಿಪೂರ್ವ ಶಿಕ್ಷಣ ಇಲಾಖೆ ಸರಕಾರಿ ಪದವಿಪೂರ್ವ ಕಾಲೇಜು , ಬಾಡ , ಇವರ ಆಶ್ರಯದಲ್ಲಿ ಕುಮಟಾ ತಾಲೂಕಾ ಮಟ್ಟದ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.ಕ್ರೀಡಾಕ್ಷೇತ್ರವು ಇಚ್ಛಾಶಕ್ತಿ, ಏಕಾಗ್ರತೆ ಮತ್ತು ಸ್ಪರ್ಧಾ ಮನೋಭಾವವನ್ನು ಬೆಳೆಸುತ್ತದೆ. ನಿರಂತರವಾದ ಕಠಿಣ ಪ್ರಯತ್ನದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ. ಸೋಲು ಕೊನೆಯಲ್ಲ. ಸೋಲೇ ಗೆಲುವಿನ ಸೋಪಾನ. ಕ್ರೀಡೆಯಲ್ಲಿ ಪರಿಣಿತರಾದವರಿಗೆ ಶ್ಯೆಕ್ಷಣಿಕ ಕ್ಷೇತ್ರದಲ್ಲೂ ಹಲವಾರು ಅವಕಾಶಗಳಿವೆ. ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೆ ಉಜ್ವಲ ಭವಿಷ್ಯವಿದೆ. ಕ್ರೀಡೆಯ ಮುಂದಿನ ಹಂತದ ಸ್ಪರ್ಧೆಗಳಿಗೆ ತಯಾರಿಯನ್ನು ಮಾಡಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ದಹುದ್ ಕಾಸಿಂ ಬಿಕ್ಬಾ, ಕಾಗಲ ಗ್ರಾಮ ಪಂಚಾಯತ್ ಅಧ್ಯಕ್ಷ ಶಶಿಕಾಂತ ನಾಯ್ಕ, ಕಾಗಲ್ ಕಾಲೇಜಿನ್ ಪ್ರಾಚಾರ್ಯರಾದ ಮೋಹನ ನಾಯ್ಕ, ಎಸ್ ಡಿ ಸಿ ಸಮಿತಿ ಸದಸ್ಯ ಜಗನಾಥ್ ನಾಯ್ಕ, ನೆಲ್ಲಿಕೇರಿ ಕಾಲೇಜಿನ್ ಪ್ರಾಚಾರ್ಯರಾದ ಸತೀಶ್ ಬಿ ನಾಯ್ಕ, ಸುಲಭ ಸೇವಾ ಸಂಸ್ಥೆಯ ಮುಖ್ಯಸ್ಥರಾದ ದಿವಾಕರ ಅಘನಾಶಿನಿ ಇದ್ದರೂ.

ವರದಿ: ನಟರಾಜ ಗದ್ದೆಮನೆ ಕುಮಟಾ

error: