December 6, 2022

Bhavana Tv

Its Your Channel

ಹಿರೇಗುತ್ತಿ ಹೈಸ್ಕೂಲಿನ ಮಾದೇವಿ ಗೌಡ ರಾಷ್ಟ್ರೀಯ ಪೋಷಣ ಮಾಸಾಚರಣೆ ಪ್ರಬಂಧ ಸ್ಪರ್ಧೆಯಲ್ಲಿ ತಾಲೂಕಿಗೆ ಪ್ರಥಮ

ಕುಮಟಾ: ಸಾರ್ವಜನಿಕ ಶಿಕ್ಷಣ ಇಲಾಖೆ ಕಾರವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕುಮಟಾ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟಿçÃಯ ಪೋಷಣ ಮಾಸಾಚರಣೆ ಅಂಗವಾಗಿ ಕುಮಟಾ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಆಧುನಿಕ ಜೀವನ ಶೈಲಿಯಲ್ಲಿ ಪೌಷ್ಟಿಕ ಆಹಾರದ ಅಗತ್ಯತೆ ಎಂಬ ವಿಷಯದ ಪ್ರಬಂಧ ಸ್ಪರ್ಧೆಯಲ್ಲಿ ಹಿರೇಗುತ್ತಿ ಸೆಕೆಂಡರಿ ಹೈಸ್ಕೂಲಿನ 9 ನೇ ತರಗತಿ ವಿದ್ಯಾರ್ಥಿನಿ ಮಾದೇವಿ ಮಂಗೇಶ ಗೌಡ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ.
ಕುಮಟಾ ತಾಲೂಕಿಗೆ ಪ್ರಥಮಸ್ಥಾನ ಪಡೆದ ವಿದ್ಯಾರ್ಥಿನಿ ಮಾದೇವಿ ಮಂಗೇಶ ಗೌಡ ಹಾಗೂ ಮಾರ್ಗದರ್ಶನ ನೀಡಿದ ಶಿಕ್ಷಕರಿಗೆ ಮಹಾತ್ಮಗಾಂಧೀ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಹೊನ್ನಪ್ಪ ಎನ್ ನಾಯಕ, ಉಪಾಧ್ಯಕ್ಷ ಶ್ರೀ ಶ್ರೀಕಾಂತ ನಾಯಕ ಕಾರ್ಯದರ್ಶಿ ಮೋಹನ ಬಿ ಕೆರೆಮನೆ ಹಾಗೂ ಆಡಳಿತ ಮಂಡಳಿ ಸದಸ್ಯರು, ಮುಖ್ಯಾಧ್ಯಾಪಕ ರೋಹಿದಾಸ ಎಸ್ ಗಾಂವಕರ ಹಾಗೂ ಶಿಕ್ಷಕವೃಂದ ಮತ್ತು ಹಿರೇಗುತ್ತಿ ಗ್ರಾಮ ಮಂಚಾಯತ ಅಧ್ಯಕ್ಷರು ನಾಗರತ್ನ ಗಾಂವಕರ, ಉಪಾಧ್ಯಕ್ಷ ಶಾಂತಾ ಎನ್ ನಾಯಕ ಹಾಗೂ ಸದಸ್ಯರು, ಆಶ್ರಯ ಪೌಂಡೇಶನ್ ರಾಜೀವ ಗಾಂವಕರ, ಬ್ರಹ್ಮ ಜಟಕ ಯುವಕ ಸಂಘ ಅಧ್ಯಕ್ಷರಾದ ಜಗದೀಶ ನಾಯಕ, ಕಾರ್ಯದರ್ಶಿ ಗುರುರಾಜ ನಾಯಕ ಮತ್ತು ಸದಸ್ಯರು ಹಾಗೂ ಊರಿನ ನಾಗರಿಕರು ಅಭಿನಂದಿಸಿ ಮುಂದಿನ ಹಂತಕ್ಕೆ ಶುಭ ಕೋರಿದ್ದಾರೆ.

About Post Author

error: