May 12, 2024

Bhavana Tv

Its Your Channel

ಕುಮಟಾದ ಮಣಕಿ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಸಮಾವೇಶ ಹಮ್ಮಿಕೊಂಡ ಬಗ್ಗೆ ಕುಮಟಾ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ

ಕುಮಟಾದ ಮಣಕಿ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಸಮಾವೇಶ ಹಮ್ಮಿಕೊಂಡಬಗ್ಗೆ ಕುಮಟಾ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಮತ್ತು ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆ ಅವರು ನ.24ರಂದು ಕುಮಟಾದ ಮಣಕಿ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದೇವೆ. ಈ ಸಮಾವೇಶಕ್ಕೆ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಜ್ಯ ಉಸ್ತುವಾರಿ ಸುರ್ಜೇವಾಲ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ, ಮಾಜಿ ಸಚಿವ ಹಾಗೂ ಹಿರಿಯ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಪರೇಶ ಮೇಸ್ತನ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಂಡ ಬಿಜೆಪಿಗರು ಜಿಲ್ಲೆಯಲ್ಲಿ ಕೋಮು ಗಲಬೆ ಸೃಷ್ಟಿಸಿ, ಅಧಿಕಾರ ಹಿಡಿದರು. ಬಿಜೆಪಿಗರ ಆಗ್ರಹದಂತೆ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿದ್ದೇವು. ಇವರದ್ದೆ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಿಬಿಐ ವರದಿ ನೀಡುವ ಮೂಲಕ ಇದೊಂದು ಆಕಸ್ಮಿಕ ಮತ್ತು ಸಹಜ ಸಾವೆಂದು ಸ್ಪಷ್ಟಪಡಿಸಿದೆ. ಬಿಜೆಪಿಗರ ಸುಳ್ಳಿನ ಮುಖವಾಡ ಕಳಚಿಬಿದ್ದಿದೆ. ಆದರೂ ಸತ್ಯವನ್ನು ಒಪ್ಪಿಕೊಳ್ಳುವ ಮನಸ್ಥಿತಿಯಲ್ಲಿಲ್ಲದ ಬಿಜೆಪಿಗರು ಮತ್ತೆ ಪುನರ್ ತನಿಖೆಯ ಹೊಸ ನಾಟಕ ಶುರು ಮಾಡಿದ್ದಾರೆ. ಈ ನಾಟಕಕ್ಕೆ ತೆರೆ ಎಳೆಯುವ ಉದ್ದೇಶದಿಂದ ಮತ್ತು ಈ ಪ್ರಕರಣದ ಸತ್ಯಾಸತ್ಯತೆ ಜನರ ಮುಂದೆ ತೆರೆದಿಡಲು ಜನ ಜಾಗೃತಿ ಸಮಾವೇಶ ಹಮ್ಮಿಕೊಂಡಿದ್ದೇವೆ. ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.
ಇನ್ನು ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಜಾಸ್ತಿಯಾಗುತ್ತಿದ್ದು, ಆಕಾಂಕ್ಷಿಗಳ ನಡುವೆ ಬಣ ರಾಜಕೀಯ ಶುರುವಾದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಆರ್ ವಿ ದೇಶಪಾಂಡೆ ಅವರು, ಟಿಕೆಟ್ ಕೇಳುವುದು ಆಕಾಂಕ್ಷಿಗಳ ಸ್ವಾತಂತ್ರö್ಯ. ಹಾಗಾಗಿ ಆಕಾಂಕ್ಷಿಗಳು ಬಿ ಫಾರ್ಮ್ಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಅಂತೀಮವಾಗಿ ಪಕ್ಷ ಯಾರಿಗೆ ಟಿಕೆಟ್ ನೀಡುತ್ತದೆಯೋ ಅವರ ಗೆಲುವಿಗೆ ಒಗ್ಗಟ್ಟಾಗಿ ದುಡಿಯುವುದಾಗಿ ಈಗಾಗಲೇ ಆಕಾಂಕ್ಷಿಗಳು ಪಕ್ಷದ ಸಭೆಯಲ್ಲಿ ಸ್ಪಷ್ಪಪಡಿಸಿದ್ದಾರೆ. ಇನ್ನು ಆಕಾಂಕ್ಷಿಗಳು ಅರ್ಜಿ ಸಲ್ಲಿಕೆಗೆ 2 ಲಕ್ಷ ರೂ. ಡಿಡಿ ಪಕ್ಷಕ್ಕೆ ನೀಡಿರುವುದನ್ನು ಸಮರ್ಥಿಸಿಕೊಂಡ ದೇಶಪಾಂಡೆ ಅವರು, ಪಕ್ಷ ನಡೆಯಲು ಮುಖಂಡರು ಶುಲ್ಕ ನೀಡಲೇ ಬೇಕು. ಕೆಲ ಪಕ್ಷದವರು ಪಾರ್ಟಿ ಫಂಡ್ ಎಂದು ಒಳಗೊಳಗೆ ಪಡೆಯುತ್ತಾರೆ. ನಾವು ಅಧಿಕೃತವಾಗಿ ಪಡೆದಿದ್ದೇವೆ ಎಂದರು.
ವರದಿ; ವಿಶ್ವನಾಥ ಜಿ ನಾಯ್ಕ ಕುಮಟಾ

error: