ಕುಮಟಾ: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಕುಮಟಾ, ಉತ್ತರಕನ್ನಡ 2022-23 ನೇ ಸಾಲಿನಲ್ಲಿ ಹಮ್ಮಿಕೊಂಡಿರುವ ಗಿಬ್ ಗರ್ಲ್ಸ ಹೈಸ್ಕೂಲ್ ಕುಮಟಾದಲ್ಲಿ ನಡೆದ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಹಿರೇಗುತ್ತಿ ಹೈಸ್ಕೂಲ್ ವಿಜ್ಞಾನ ಶಿಕ್ಷಕ ಮಹಾದೇವ ಬೊಮ್ಮು ಗೌಡ ಇವರು ದ್ವಿತೀಯ ಸ್ಥಾನ ಪಡೆದಿದ್ದಾರೆ.
ಆಯ್ಕೆಯಾದ ಶಿಕ್ಷಕರಿಗೆ ಮಹಾತ್ಮಗಾಂಧೀ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಹೊನ್ನಪ್ಪ ನಾಯಕ, ಉಪಾಧ್ಯಕ್ಷರಾದ ಶ್ರೀಕಾಂತ ನಾಯಕ, ಕಾರ್ಯದರ್ಶಿ ಮೋಹನ ಕೆರೆಮನೆ, ಮತ್ತು ಸದಸ್ಯರು, ಮುಖ್ಯೋಪಾಧ್ಯಾಯರಾದ ರೋಹಿದಾಸ ಗಾಂವಕರ, ಶಿಕ್ಷಕ ವೃಂದದವರು, ಆಶ್ರಯ ಫೌಂಡೇಶನ್ ಅಧ್ಯಕ್ಷರಾದ ರಾಜೀವ ಗಾಂವಕರ, ಗ್ರಾಮ ಪಂಚಾಯತ ಅಧ್ಯಕ್ಷರಾದ ನಾಗರತ್ನ ಗಾಂವಕರ ಗ್ರಾಮ ಪಂಚಾಯತ ಉಪಾಧ್ಯಕ್ಷರಾದ ಶಾಂತಾ ಎನ್ ನಾಯಕ, ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ನೀಲಕಂಠ ನಾಯಕ, ಬ್ರಹ್ಮ ಜಟಕ ಯುವಕ ಸಂಘದ ಅಧ್ಯಕ್ಷರಾದ ಪಪ್ಪು ನಾಯಕ. ಸ್ಪಂದನ ಫೌಂಡೇಶನ್‌ನ ಎನ್. ರಾಮು ಹಿರೇಗುತ್ತಿ, ಊರ ನಾಗರಿಕರು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಕುಮಟಾ, ಕೇತ್ರ ಶಿಕ್ಷಣಾಧಿಕಾರಿಗಳು ಕುಮಟಾ ಇವರು ಅಭಿನಂದನೆ ಸಲ್ಲಿಸಿ ಶುಭಹಾರೈಸಿದರು.
More Stories
ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿ ಶಾಲೆಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ: ಶೇ. 94.23
ಮೋದಿ ಒಬ್ಬ ಒಳ್ಳೆ ನಾಟಕಕಾರ, ಇವೆಂಟ್ ಮ್ಯಾನೇಜರ್: ಸಿದ್ದರಾಮಯ್ಯ
ಜೆಡಿಎಸ್ ತೊರೆದು ‘ಕೈ’ ಹಿಡಿದ ಶಾಬಂದ್ರಿ