December 22, 2024

Bhavana Tv

Its Your Channel

ಶ್ರೀ ಶಾಂತಿಕಾ ಪರಮೇಶ್ವರಿ ಸಮುದಾಯ ಭವನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ

ಕುಮಟಾ:- ಮೂರೂರು ವಲಯದ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದವರು ಸಾಂತಗಲ್ ನ ಶ್ರೀ ಶಾಂತಿಕಾ ಪರಮೇಶ್ವರಿ ಸಮುದಾಯ ಭವನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ

ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ವ್ಯವಸ್ಥಾಪನಾ ಸಮಿತಿ ಸಾಂತಗಲ್, ಶ್ರೀ ಶಾಂತಿಕಾ ಪರಮೇಶ್ವರಿ ಸಮುದಾಯಭವನ ಸಾಂತಗಲ್ ಹಾಗೂ ಗಣ್ಯರ ಸಹಭಾಗಿತ್ವದಲ್ಲಿ ಜರುಗಿತು.
ದೀಪಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ದಿನಕರ ಶೆಟ್ಟಿಯವರು ಪರಮಪೂಜ್ಯ ಡಾ|| ವೀರೇಂದ್ರ ಹೆಗ್ಗಡೆಯವರ ದಿವ್ಯಾಶೀರ್ವಾದದಿಂದ ಕಾರ್ಯನಿರ್ವಹಿಸುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ದೇಶದಲ್ಲಿಯೇ ಮಾದರಿ ಸಂಸ್ಥೆಯಾಗಿದೆ. ಇದು ಸಂಘದ ಸದಸ್ಯರನ್ನು ಆರ್ಥಿಕವಾಗಿ ಸದೃಢಗೊಳಿಸುವುದಲ್ಲದೆ, ಅವರ ಸಾಮಾಜಿಕ ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿದೆ. ವಿಶೇಷವಾಗಿ ಗ್ರಾಮೀಣ ಮಹಿಳೆಯರು ಸಂಘಟಿತರಾಗಲು ಹಾಗೂ ಸಬಲೀಕರಣಗೊಳ್ಳಲು ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯು ಅತ್ಯುತ್ತಮ ವೇದಿಕೆಯನ್ನು ಕಲ್ಪಿಸಿದೆ. ಅತ್ಯಾಧುನಿಕ ಕೃಷಿ ತರಬೇತಿ, ಕೃಷಿ ಯಂತ್ರೋಪಕರಣಗಳಿಗೆ ಸಹಾಯಧನ ಒದಗಿಸುವುದು, ಸ್ವ ಉದ್ಯೋಗಕ್ಕಾಗಿ ಕಡಿಮೆ ಬಡ್ಡಿದರದಲ್ಲಿ ಸಾಲ ವಿತರಿಸುವುದು, ಸರ್ಕಾರದ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವುದರ ಜೊತೆಗೆ ಅರ್ಹರ ಮನೆಬಾಗಿಲಿಗೆ ಅವುಗಳನ್ನು ತಲುಪಿಸುವ ಮಹತ್ತರ ಕಾರ್ಯವನ್ನು ನಿರ್ವಹಿಸುತ್ತಿದೆ. ಮದ್ಯವ್ಯಸನದಂತಹ ಪಿಡುಗುಗಳ ಮುಕ್ತಿಗಾಗಿ ಶಿಬಿರಗಳನ್ನು ಏರ್ಪಡಿಸುತ್ತಿರುವುದು ಶ್ಲಾಘನೀಯ ಕಾರ್ಯಕ್ರಮಗಳಾಗಿವೆ ಎಂದು ಹೇಳಿದರು.

ನಂತರ ಮಾತನಾಡಿದ ಶೈಲಾ ವಿ ನಾಯ್ಕ ಧಾರ್ಮಿಕ ಉಪನ್ಯಾಸ ಮಾಡಿದರು

ತಾಲ್ಲೂಕು ಯೋಜನಾದಿಕಾರಿಯಾದ ಕಲ್ಮೆಶ ಎಸ್‌ರವರು ಮಾತನಾಡಿದರು.

ಪೂಜಾ ಸಮಿತಿಯ ಅಧ್ಯಕ್ಷರು ಹಾಗೂ ಸ್ಥಳೀಯ ಮುಖಂಡರು ಆಗಿರುವ ಗಿರಿಯಾ ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂತೆಗುಳಿ ಗ್ರಾಮಪಂಚಾಯತ್ ಅಧ್ಯಕ್ಷೆ ಶ್ರೀಮತಿ ಕಮಲಾ ಮುಕ್ರಿ, ಪ್ರಗತಿಬಂಧು ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿರುವ ಮಹೇಶ ನಾಯ್ಕ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ಥಳೀಯ ಮುಖಂಡರಾದ ವಿನಾಯಕ ಭಟ್, ಪ್ರಗತಿಪರ ಕೃಷಿಕರಾದ ಮಹದೇವ ನಾಯ್ಕ, ಸಂತೆಗುಳಿ ಗ್ರಾಮಪಂಚಾಯತ್ ಸದಸ್ಯರುಗಳಾದ ಶ್ರೀಮತಿ ಶೈಲಾ ಗೌಡ, ಇಬ್ರಾಹಿಮ್ ಸಾಬ್, ಶ್ರೀಮತಿ ಗೌರಿ ಮುಕ್ರಿ ಮತ್ತಿತರರು ಇದ್ದರು.

ವರದಿ ವಿಶ್ವನಾಥಜಿ ನಾಯ್ಕ ಕುಮಟಾ

error: