
ಕುಮಟಾ: ಚಿತ್ರಗಿ ಮಹಾತ್ಮಾ ಗಾಂಧಿ ಪ್ರೌಢಶಾಲೆಯ ಭರತ ಈಶ್ವರ ಅಂಬಿಗ ತುಮಕೂರಿನಲ್ಲಿ ನಡೆದ ವಿಶೇಷ ಚೇತನರ ರಾಜ್ಯಮಟ್ಟದ ಕ್ರೀಡಾಕೂಟದ ಭರ್ಚಿ ಎಸೆತದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಅಮೋಘ ಸಾಧನೆಗೈದಿದ್ದಾನೆ. ಶಾಲಾ ದೈಹಿಕ ಶಿಕ್ಷಕಿ ಚಂದ್ರಕಲಾ ಆಚಾರ್ಯ ರವರ ತರಬೇತಿಯಲ್ಲಿ, ಪಾಲಕರಾದ ಈಶ್ವರ್ ಹಾಗೂ ರೇಖಾಳ ಪ್ರೋತ್ಸಾಹದಲ್ಲಿ ಅದ್ಭುತ ಸಾಧನೆ ತೋರಿದ ಈತನಿಗೆ, ಕೆನರಾ ಎಜುಕೇಶನ ಸೊಸೈಟಿಯ ಕಾರ್ಯಾಧ್ಯಕ್ಷ ವಸುದೇವ ಪ್ರಭು ಹಾಗೂ ಸರ್ವ ಸದಸ್ಯರು, ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಎಲ್. ಭಟ್, ದೈಹಿಕ ಪರಿವೀಕ್ಷಕ ಎಸ್ ಬಿ ನಾಯಕ, ನೋಡಲ್ ಅಧಿಕಾರಿ ಕೇಶವ ನಾಯ್ಕ, ಶಾಲಾ ಮುಖ್ಯಾಧ್ಯಾಪಕ ಪಾಂಡುರAಗ ವಾಗ್ರೇಕರ್ ಹಾಗೂ ಸರ್ವ ಶಿಕ್ಷಕ ಶಿಕ್ಷಕೇತರ ವೃಂದದವರು ಅಭಿನಂದನೆಗಳನ್ನು ಸಲ್ಲಿಸಿ, ರಾಷ್ಟ್ರಮಟ್ಟದಲ್ಲಿ ಉನ್ನತ ಸಾಧನೆಗೆ ಶುಭಕಾಮನೆಯನ್ನು ಕೋರಿದ್ದಾರೆ.

More Stories
ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿ ಶಾಲೆಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ: ಶೇ. 94.23
ಮೋದಿ ಒಬ್ಬ ಒಳ್ಳೆ ನಾಟಕಕಾರ, ಇವೆಂಟ್ ಮ್ಯಾನೇಜರ್: ಸಿದ್ದರಾಮಯ್ಯ
ಜೆಡಿಎಸ್ ತೊರೆದು ‘ಕೈ’ ಹಿಡಿದ ಶಾಬಂದ್ರಿ